- ಕುಂದಾಪುರ: ದಿನಾಂಕ 28.06.2023 (ಹಾಯ್ ಉಡುಪಿ ನ್ಯೂಸ್) ಕಸಬಾ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಯುವಕನನ್ನು ಕುಂದಾಪುರ ಪೊಲೀಸ್ ಠಾಣೆಯ ಪಿಎಸ್ಐ ಯು ಬಿ ನಂದಕುಮಾರ್ ರವರು ಬಂಧಿಸಿದ್ದಾರೆ.
- ಕುಂದಾಪುರ ಪೊಲೀಸ್ ಠಾಣೆಯ ಪಿಎಸ್ಐ ಯು ಬಿ ನಂದಕುಮಾರ್ ಇವರು ದಿನಾಂಕ: 27-06-2023 ರಂದು ಠಾಣಾ ಸರಹದ್ದಿನಲ್ಲಿ ಸಿಬ್ಬಂದಿಯವರೊಂದಿಗೆ ಕುಂದಾಪುರ ಠಾಣಾ ವ್ಯಾಪ್ತಿಯಲ್ಲಿ ರೌಂಡ್ಸ್ ಕರ್ತವ್ಯದಲ್ಲಿರುವ ಸಮಯ ಸಾರ್ವಜನಿಕರೊಬ್ಬರು ಕರೆ ಮಾಡಿ ಕಸಬಾ ಗ್ರಾಮದ ಪಾರಿಜಾತ ಸರ್ಕಲ್ ಬಳಿ ಓರ್ವ ವ್ಯಕ್ತಿ ಗಾಂಜಾ ಸೇವನೆ ಮಾಡುತ್ತಿರುವುದಾಗಿ ಮಾಹಿತಿ ನೀಡಿದ್ದಾರೆ.
- ಆ ಕೂಡಲೇ ಪಿಎಸ್ಐ ರವರು ಠಾಣಾ ಸಿಬ್ಬಂದಿಯವರೊಂದಿಗೆ ಮಾಹಿತಿ ಬಂದ ಸ್ಥಳಕ್ಕೆ ತೆರಳಿ ನೋಡಿದಾಗ ಅಲ್ಲಿ ಸಾರ್ವಜನಿಕ ಸ್ಥಳದಲ್ಲಿ ತೂರಾಡಿಕೊಂಡು ಓರ್ವನು ಅಮಲಿನಲ್ಲಿರುವುದು ಕಂಡುಬಂದಿದ್ದು, ಆತನನ್ನು ಪೊಲೀಸರು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಮಾದಕ ವಸ್ತು ಸೇವನೆ ಮಾಡಿರುವ ಅನುಮಾನ ಬಂದ ಮೇರೆಗೆ ಆತನನ್ನು ಬಂಧಿಸಿ ವಶಕ್ಕೆ ಪಡೆದುಕೊಂಡು ಠಾಣೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸಿದಾಗ ತನ್ನ ಹೆಸರು ನಾಜೀರ್ (21 ವರ್ಷ) ವಾಸ; ಶೇಟ್ ಟವರ್ಸ, ಪಾರಿಜಾತ ಹೊಟೇಲ್ ಹತ್ತಿರ, ಕಸಬಾ ಗ್ರಾಮ ಕುಂದಾಪುರ ತಾಲೂಕು ಎಂದು ತಿಳಿಸಿದ್ದು ಆತನನ್ನು ವೈದ್ಯಕೀಯ ತಪಾಸಣೆ ಬಗ್ಗೆ ಶ್ರೀ ಮಾತಾ ಆಸ್ಪತ್ರೆ ಕುಂದಾಪುರದ ವೈದ್ಯಾಧಿಕಾರಿಯವರ ಮುಂದೆ ಹಾಜರುಪಡಿಸಿದ್ದು, ಅವನನ್ನು ಪರೀಕ್ಷಿಸಿದ ವೈದ್ಯರು ಆತನು ಗಾಂಜಾ ಸೇವಿಸಿರುವುದು ದೃಢಪಟ್ಟಿರುವುದಾಗಿ ,ದಿನಾಂಕ: 27/06/2023 ರಂದು ವರದಿ ನೀಡಿರುತ್ತಾರೆ ಎನ್ನಲಾಗಿದೆ.
- ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಕಲಂ: 27(b) NDPS Actಯಂತೆ ಪ್ರಕರಣ ದಾಖಲಾಗಿದೆ.