- ಕುಂದಾಪುರ: ದಿನಾಂಕ 29-06.2023 (ಹಾಯ್ ಉಡುಪಿ ನ್ಯೂಸ್) ಮೂಡುಗೋಪಾಡಿ ಜಂಕ್ಷನ್ ಬಳಿ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಯುವಕನನ್ನು ಕುಂದಾಪುರ ಪೊಲೀಸ್ ಠಾಣೆಯ ಪಿಎಸ್ಐ ಯವರಾದ ಪ್ರಸಾದ್ ಕುಮಾರ ಕೆ ಯವರು ಬಂಧಿಸಿದ್ದಾರೆ.
- ಕುಂದಾಪುರ ಪೊಲೀಸ್ ಠಾಣೆ ಪಿಎಸ್ಐ ಯವರಾದ ಪ್ರಸಾದ್ ಕುಮಾರ ಕೆ ಅವರು ಠಾಣಾ ಸರಹದ್ದಿನಲ್ಲಿ ಸಿಬ್ಬಂದಿಯವರೊಂದಿಗೆ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ,:27-06-2023 ರಂದು ರಾತ್ರಿ ರೌಂಡ್ಸ್ ಕರ್ತವ್ಯದಲ್ಲಿರುವ ಸಮಯ ಮಾಹಿತಿದಾರರೊಬ್ಬರು ಕರೆ ಮಾಡಿ ಗೋಪಾಡಿ ಗ್ರಾಮದ ಮೂಡುಗೋಪಾಡಿ ಜಂಕ್ಷನ್ ಬಳಿ ಓರ್ವ ಗಾಂಜಾ ಸೇವನೆ ಮಾಡುತ್ತಿರುವುದಾಗಿ ಮಾಹಿತಿ ನೀಡಿದ್ದಾರೆ.
- ಆ ಕೂಡಲೇ ಸಿಬ್ಬಂದಿಯವರೊಂದಿಗೆ ರಾತ್ರಿ ಸ್ಥಳಕ್ಕೆ ತೆರಳಿ ನೋಡಿದಾಗ ಅಲ್ಲಿ ತೂರಾಡಿಕೊಂಡು ಓರ್ವನು ಅಮಲಿನಲ್ಲಿರುವುದು ಕಂಡುಬಂದಿದ್ದು ಆತನನ್ನು ಪೊಲೀಸರು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಮಾದಕ ವಸ್ತು ಸೇವನೆ ಮಾಡಿರುವ ಅನುಮಾನ ಬಂದ ಮೇರೆಗೆ ಆತನನ್ನು ಬಂಧಿಸಿ, ವಶಕ್ಕೆ ಪಡೆದುಕೊಂಡು ಠಾಣೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸಿದಾಗ ಆತ ತನ್ನ ಹೆಸರು ಮೊಹಮ್ಮದ್ ಹಫೀಜ್ ಪ್ರಾಯ 21 ವರ್ಷ ವಾಸ; ಜನತಾ ಕಾಲೋನಿ, 2ನೇ ಕ್ರಾಸ್, ಮೂಡುಗೋಪಾಡಿ ಗ್ರಾಮ ಕುಂದಾಪುರ ತಾಲೂಕು ಎಂದು ತಿಳಿಸಿದ್ದು ಆತನನ್ನು ವೈದ್ಯಕೀಯ ತಪಾಸಣೆ ಬಗ್ಗೆ ಶ್ರೀ ಮಾತಾ ಆಸ್ಪತ್ರೆ ಕುಂದಾಪುರದ ವೈದ್ಯಾಧಿಕಾರಿಯವರ ಮುಂದೆ ಹಾಜರುಪಡಿಸಿದ್ದು, ಆತನು ಗಾಂಜಾ ಸೇವಿಸಿರುವುದು ದೃಢಪಟ್ಟಿರುತ್ತದೆ.
- ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಕಲಂ:27(b) NDPS Act ನಂತೆ ಪ್ರಕರಣ ದಾಖಲಾಗಿದೆ.