Spread the love

ಉಡುಪಿ: ದಿನಾಂಕ:06-07-2023(ಹಾಯ್ ಉಡುಪಿ ನ್ಯೂಸ್)

ಉಡುಪಿ ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆ ನಾಳೆಯೂ ಮುಂದುವರೆಯುವ ಬಗ್ಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ಶಾಲಾ -ಕಾಲೇಜುಗಳ ಮಕ್ಕಳ ಹಿತ ದೃಷ್ಟಿಯಿಂದ ಜಿಲ್ಲಾಧಿಕಾರಿಗಳು ನಾಳೆ ದಿನಾಂಕ 07-07-2023 ರಂದು ಕೂಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ,ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಮಕ್ಕಳು ಸುರಕ್ಷಿತವಾಗಿ ಮನೆಯಲ್ಲಿರುವಂತೆ ಸೂಚಿಸಲಾಗಿದೆ.

error: No Copying!