ಬೈಂದೂರು : ದಿನಾಂಕ: 09-07-2023(ಹಾಯ್ ಉಡುಪಿ ನ್ಯೂಸ್) ಬೈಂದೂರು ಪೊಲೀಸ್ ಠಾಣೆಯ ವ್ಯಾಪ್ತಿಯ ನಾಗೂರು ರಿಕ್ಷಾ ನಿಲ್ದಾಣದ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಆಟ ನಡೆಸುತ್ತಿದ್ದ ವ್ಯಕ್ತಿಯನ್ನು ಬೈಂದೂರು ಪೊಲೀಸ್ ಠಾಣೆಯ ಪ್ರೊಬೇಷನರಿ ಡಿವೈಎಸ್ಪಿ ರವಿ ಅವರು ಬಂಧಿಸಿದ್ದಾರೆ.
ಬೈಂದೂರು ಪೊಲೀಸ್ ಠಾಣೆ ಪ್ರೊಬೇಷನರಿ ಡಿವೈಎಸ್ಪಿ ರವಿ ಅವರು ದಿನಾಂಕ:08-07-2023 ರಂದು ಠಾಣಾ ಸರಹದ್ದಿನಲ್ಲಿ ಸಿಬ್ಬಂದಿಗಳೊಂದಿಗೆ ಇಲಾಖಾ ಜೀಪಿನಲ್ಲಿ ರೌಂಡ್ಸ್ ಕರ್ತವ್ಯದಲ್ಲಿರುವಾಗ ಠಾಣಾ ಪಿಎಸ್ಐ ರವರು ಕರೆ ಮಾಡಿ ಬೈಂದೂರು ತಾಲೂಕು ಕಿರಿಮಂಜೇಶ್ವರ ಗ್ರಾಮದ ನಾಗೂರು ರಿಕ್ಷಾ ನಿಲ್ದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಆಟ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದು ಆ ಕೂಡಲೇ ಮಾಹಿತಿ ಬಂದ ಸ್ಥಳಕ್ಕೆ ದಾಳಿ ನಡೆಸಿ ಅಲ್ಲಿ ಮಟ್ಕಾ ಚೀಟಿ ಬರೆಯುತ್ತಿದ್ದ ಸುಬ್ಬ ಪೂಜಾರಿ (65) ಎಂಬವರನ್ನು ಬಂಧಿಸಿ ವಶಕ್ಕೆ ಪಡೆದು ಪೊಲೀಸರು ವಿಚಾರಿಸಿದಾಗ ಆತನು ತನ್ನ ಸ್ವಂತ ಲಾಭಕೋಸ್ಕರ ಅಕ್ರಮವಾಗಿ ಮಟ್ಕಾ ಜುಗಾರಿ ಆಡುತ್ತಿರುವುದಾಗಿ ಒಪ್ಪಿಕೊಂಡಿದ್ದು ನಂತರ ಆತನ ಕೈಯಲ್ಲಿದ್ದ ಮಟ್ಕಾ ಜುಗಾರಿ ಆಟದಿಂದ ಅಕ್ರಮವಾಗಿ ಸಂಗ್ರಹಿಸಿದ ನಗದು ಹಣ ರೂ 2,240 /-,ಮಟ್ಕಾ ನಂಬ್ರ ಬರೆದ ಚೀಟಿ-1 ಹಾಗೂ ಬಾಲ್ ಪೆನ್ನು-1 ನ್ನು ಸ್ವಾಧೀನಪಡಿಸಿಕೊಂಡು ಆರೋಪಿತನ ಮೇಲೆ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಕಲಂ. 78 (i) (iii) KP ACT ಯಂತೆ ಪ್ರಕರಣ ದಾಖಲಾಗಿದೆ.