Spread the love
  • ಬ್ರಹ್ಮಾವರ: ದಿನಾಂಕ :12/07/2023 (ಹಾಯ್ ಉಡುಪಿ ನ್ಯೂಸ್) ಉಪ್ಪೂರು ಗ್ರಾಮದ ಅಮ್ಮುಂಜೆ ಬಸ್ಸು ನಿಲ್ದಾಣದ ಬಳಿ ಮಟ್ಕಾ ಜುಗಾರಿ ಆಟ ನಡೆಸುತ್ತಿದ್ದ ವ್ಯಕ್ತಿಯನ್ನು ಬ್ರಹ್ಮಾವರ ಪೊಲೀಸ್‌ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ರಾಜ ಶೇಖರ ವಂದಲಿಯವರು ಬಂಧಿಸಿದ್ದಾರೆ.
  • ಬ್ರಹ್ಮಾವರ ಪೊಲೀಸ್ ಠಾಣೆ, ಪೊಲೀಸ್ ಉಪ ನಿರೀಕ್ಷಕರಾದ ರಾಜಶೇಖರ ವಂದಲಿ ಅವರು ದಿನಾಂಕ:11-07-2023ರಂದು ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಬ್ರಹ್ಮಾವರ ತಾಲೂಕು, ಉಪ್ಪೂರು ಗ್ರಾಮದ ಉಪ್ಪೂರು ಅಮ್ಮುಂಜೆ ಬಸ್ಸು ನಿಲ್ದಾಣದ ಬಳಿ  ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜೂಜಾಟ ನಡೆಯುತ್ತಿರುವ ಬಗ್ಗೆ ದೊರೆತ ಸಾರ್ವಜನಿಕ ಮಾಹಿತಿ ಮೇರೆಗೆ ದಾಳಿ ನಡೆಸಿ ಸುಧೀಶ್ (19) , ವಾಸ: ಕೊಂಡಾಡಿ, ಬೊಮ್ಮರಬೆಟ್ಟು ಗ್ರಾಮ, ಹಿರಿಯಡ್ಕ, ಉಡುಪಿ ತಾಲೂಕು ಎಂಬಾತನನ್ನು ಬಂಧಿಸಿ ಆತನ ಬಳಿ ಇದ್ದ ಮಟ್ಕಾ ಜುಗಾರಿ ಆಟಕ್ಕೆ ಸಂಗ್ರಹಿಸಿದ ಹಣ ನಗದು ರೂಪಾಯಿ 1020/-, ಮಟ್ಕಾ ನಂಬ್ರ ಬರೆದ ಚೀಟಿ -1 ಹಾಗೂ ಬಾಲ್‌ ಪೆನ್ನು -1 ನ್ನು ವಶಕ್ಕೆ ಪಡೆದಿರುತ್ತಾರೆ.
  • ಈ ಬಗ್ಗೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಕಲಂ: 78(i)(iii) K.P Act ರಂತೆ ಪ್ರಕರಣ ದಾಖಲಾಗಿದೆ.
error: No Copying!