ಬೆಂಗಳೂರು: ದಿನಾಂಕ 15-07-2023(ಹಾಯ್ ಉಡುಪಿ ನ್ಯೂಸ್) ಸಿದ್ಧರಾಮಯ್ಯ ನಾಯಕತ್ವದ ಕಾಂಗ್ರೆಸ್ ಸರಕಾರದ ಬಹುನಿರೀಕ್ಷಿತ ಗ್ರಹಲಕ್ಷ್ಮೀ ಯೋಜನೆಗೆ ಜುಲೈ 19 ರಂದು ಚಾಲನೆ ಸಿಗಲಿದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶ್ರೀ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಇಂದು ಇಲಾಖೆಯ ಅಧಿಕಾರಿಗಳೊಂದಿಗೆ, ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ವೀಡಿಯೋ ಸಂವಾದ ನಡೆಸಿ ಗ್ರಹಲಕ್ಷ್ಮೀ ಯೋಜನೆಗೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕೆಂದು ಸೂಚಿಸಿರುವುದಾಗಿ ತಿಳಿಸಿದ್ದಾರೆ.