- ಮಲ್ಪೆ: ದಿನಾಂಕ : 17/07/2023(ಹಾಯ್ ಉಡುಪಿ ನ್ಯೂಸ್) ಮಲ್ಪೆ ಬಂದರಿನ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ದಂಧೆ ನಡೆಸುತ್ತಿದ್ದ ವ್ಯಕ್ತಿಯನ್ನು ಮಲ್ಪೆ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಗುರುನಾಥ್ ಬಿ ಅವರು ಬಂಧಿಸಿದ್ದಾರೆ.
- ಮಲ್ಪೆ ಪೊಲೀಸ್ ಠಾಣೆ ಪೊಲೀಸ್ ಉಪ ನಿರೀಕ್ಷಕರಾದ ಗುರುನಾಥ್ ಬಿ ಅವರಿಗೆ ದಿನಾಂಕ: 16-07-2023ರಂದು ಕೊಡವೂರು ಗ್ರಾಮದ ಮಲ್ಪೆ ಬಂದರಿನ ಮುಖ್ಯ ಗೇಟ್ ಬಳಿ ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿಯೋರ್ವರು ಮಟ್ಕಾ ಜುಗಾರಿ ಆಟ ಆಡಿಸುತ್ತಿರುವುದಾಗಿ ಸಾರ್ವಜನಿಕರು ಮಾಹಿತಿ ನೀಡಿದ ಮೇರೆಗೆ ಮಟ್ಕಾ ಜುಗಾರಿ ಆಟ ಆಡುವಲ್ಲಿಗೆ ಕೂಡಲೇ ದಾಳಿ ನಡೆಸಿ ಮಟ್ಕಾ ಚೀಟಿ ಪಡೆದು ಹಣ ಸಂಗ್ರಹಿಸುತ್ತಿದ್ದವನನ್ನು ಹಿಡಿದು ಬಂಧಿಸಿ ವಿಚಾರಣೆ ನಡೆಸಿದಾಗ ಆತನ ಹೆಸರು ಕಿರಣ್ ಪೂಜಾರಿ (37), ವಾಸ: ಅಂಗಡಿ ಮನೆ ಅಮಾಸ್ಯೆ ಬೈಲು, ಅಮಾಸ್ಯೆ ಬೈಲು ಗರಡಿ ಬಳಿ ಅಮಾಸ್ಯೆ ಬೈಲುಗ್ರಾಮ ಕುಂದಾಪುರ ತಾಲೂಕು ಎಂಬುದಾಗಿ ತಿಳಿಸಿದ್ದು. ಆತನಿಂದ ಮಟ್ಕಾ ಜುಗಾರಿ ಆಟಕ್ಕೆ ಬಳಸಿದ ಒಟ್ಟು 1015/- ರೂಪಾಯಿ ,ಮಟ್ಕಾ ಚೀಟಿ-1 ಹಾಗೂ ಬಾಲ್ ಪೆನ್ನು -1 ನ್ನು ಸ್ವಾಧೀನಪಡಿಸಿಕೊಂಡಿರುತ್ತಾರೆ .
- ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಅಪರಾಧ ಕಲಂ : 78(1)&(3) kp act ರಂತೆ ಪ್ರಕರಣ ದಾಖಲಾಗಿದೆ.