- ಉಡುಪಿ: ದಿನಾಂಕ: 19-08 -2023 (ಹಾಯ್ ಉಡುಪಿ ನ್ಯೂಸ್) ಬಡಾ ಗ್ರಾಮದ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ್ದ ಯುವಕನನ್ನು ಸೆನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
- ಕಾಪು ತಾಲೂಕು, ಬಡಾ ಗ್ರಾಮದ ಮಹಾಲಿಂಗೇಶ್ವರ ದೇವಸ್ಥಾನದ ಸ್ವಾಗತ ಗೋಪುರದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮೇಲ್ನೋಟಕ್ಕೆ ಮಾದಕ ವಸ್ತುವನ್ನು ಸೇವಿಸಿರುವಂತೆ ಅನುಮಾನಾಸ್ಪದವಾಗಿ ಕಂಡು ಬಂದ ವ್ಯಕ್ತಿಯನ್ನು ಸೆನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿ ಐವಶಕ್ಕೆ ಪಡೆದು ಆತ ಗಾಂಜಾ ಸೇವನೆ ಮಾಡಿದ್ದ ಅನುಮಾನದ ಮೇರೆಗೆ ಮೆಡಿಕಲ್ ತಪಾಸಣೆಗೊಳಪಡಿಸಿರುತ್ತಾರೆ.
- ದಿನಾಂಕ 18.08.2023 ರಂದು ಮಣಿಪಾಲ ಕೆ.ಎಂ.ಸಿ. ಫಾರೆನ್ಸಿಕ್ ವಿಭಾಗದಿಂದ ಬಂದಿರುವ ತಜ್ನರ ವರದಿಯಲ್ಲಿ ಆರೋಪಿ ಸುಚಿತ್ ಗಾಂಜಾ ಸೇವನೆ ಮಾಡಿರುವುದು ಧೃಡಪಟ್ಟಿರುತ್ತದೆ ಎನ್ನಲಾಗಿದೆ.
- ಈ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಕಲಂ 27 (b) ಎನ್.ಡಿ.ಪಿ.ಎಸ್ ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ.