ಬೈಂದೂರು: ದಿನಾಂಕ:28-08-2023(ಹಾಯ್ ಉಡುಪಿ ನ್ಯೂಸ್) ಶಿರೂರು ಮಾರ್ಕೆಟ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಯುವಕನನ್ನು ಬೈಂದೂರು ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ನಿರಂಜನ ಗೌಡ ಬಿಎಸ್ ಅವರು ಬಂಧಿಸಿದ್ದಾರೆ.
ಬೈಂದೂರು ಪೊಲೀಸ್ ಠಾಣೆ ಪೊಲೀಸ್ ಉಪ ನಿರೀಕ್ಷಕರಾದ ನಿರಂಜನ ಗೌಡ ಬಿಎಸ್ ರವರು ದಿನಾಂಕ 26-08-2023 ರಂದು ಸಿಬ್ಬಂದಿಗಳೊಂದಿಗೆ ಇಲಾಖಾ ಜೀಪ್ ನಲ್ಲಿ ಬೈಂದೂರು ಠಾಣಾ ವ್ಯಾಪ್ತಿಯ ಶಿರೂರು ಗ್ರಾಮದ ಹಡವಿನಕೋಣೆ ಕಡೆಯಲ್ಲಿ ರೌಂಡ್ಸ್ ಕರ್ತವ್ಯದಲ್ಲಿರುವಾಗ ಶಿರೂರು ಮಾರ್ಕೆಟ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿಯೊಬ್ಬ ತೂರಾಡಿಕೊಂಡಿರುವ ಬಗ್ಗೆ ಸಾರ್ವಜನಿಕ ಮಾಹಿತಿದಾರರಿಂದ ಮಾಹಿತಿ ಬಂದ ಮೇರೆಗೆ ಕೂಡಲೇ ಆ ಸ್ಥಳಕ್ಕೆ ತೆರಳಿದಾಗ ಶಿರೂರು ಮಾರ್ಕೆಟ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ತೂರಾಡಿಕೊಂಡಿದ್ದ ಆರೋಪಿತ ಮಹಮ್ಮದ್ ಜುಹೇರ್ ಎಂಬವನನ್ನು ಬಂಧಿಸಿ ವಶಕ್ಕೆ ಪಡೆದಿದ್ದು ಆರೋಪಿಯು ನಿಷೇದಿತ ಮಾಧಕ ವಸ್ತುಗಳನ್ನು ಸೇವಿಸಿರುವ ಸಂಶಯವಿದ್ದ ಕಾರಣ ಆರೋಪಿತ ಮೊಹಮ್ಮದ್ ಜುಹೇರ್ ನನ್ನು ವೈದ್ಯಕೀಯ ತಪಾಸಣೆಯ ಬಗ್ಗೆ ವೈದ್ಯಾಧಿಕಾರಿಗಳು ಶ್ರೀ ಮಾತಾ ಆಸ್ಪತ್ರೆ ಕುಂದಾಪುರ ರವರ ಮುಂದೆ ಹಾಜರುಪಡಿಸಿದ್ದು ಪರೀಕ್ಷಿಸಿದ ವೈದ್ಯಾಧಿಕಾರಿಯವರು ಮಹಮ್ಮದ್ ಜುಹೇರ್ ಗಾಂಜಾ ಸೇವಿಸಿರುವುದನ್ನು ದೃಢ ಪಡಿಸಿದ್ದಾರೆ ಎನ್ನಲಾಗಿದೆ
ಈ ಬಗ್ಗೆ ಬೈಂದೂರು ಪೊಲೀಸ್‌ಠಾಣೆಯಲ್ಲಿ ಕಲಂ 27 (ಬಿ) ಎನ್.ಡಿ.ಪಿ.ಎಸ್. ಕಾಯ್ದೆ-1985 ರಂತೆ ಪ್ರಕರಣ ದಾಖಲಾಗಿದೆ.