ಪಡುಬಿದ್ರಿ: ದಿನಾಂಕ 02/09/2023 (ಹಾಯ್ ಉಡುಪಿ ನ್ಯೂಸ್) ಪಡುಬಿದ್ರಿ ಪೇಟೆಯಲ್ಲಿ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಯುವಕನನ್ನು ಪಡುಬಿದ್ರಿ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಪ್ರಸನ್ನ ಎಂ.ಎಸ್ ಅವರು ಬಂಧಿಸಿದ್ದಾರೆ.
ಪಡುಬಿದ್ರಿ ಪೊಲೀಸ್ ಠಾಣೆ ಪೊಲೀಸ್ ಉಪ ನಿರೀಕ್ಷಕರಾದ ಪ್ರಸನ್ನ ಎಂ.ಎಸ್ ಅವರು ದಿನಾಂಕ: 01-09-2023ರಂದು ಸಿಬ್ಬಂದಿಯವರೊಂದಿಗೆ ರೌಂಡ್ಸ್ ನಲ್ಲಿರುವಾಗ ನಡ್ಸಾಲು ಗ್ರಾಮದ ಪಡುಬಿದ್ರಿ ಪೇಟೆಯಲ್ಲಿ ಸರ್ಫರಾಜ್(29) ಎಂಬಾತನು ಯಾವುದೋ ಅಮಲಿನಲ್ಲಿದ್ದವನಂತೆ ತೂರಾಡುತ್ತಿದ್ದು, ಅವನು ಯಾವುದೋ ಮಾದಕ ಪದಾರ್ಥ ಸೇವಿಸಿರಬಹುದು ಎಂಬ ಬಗ್ಗೆ ಅನುಮಾನಗೊಂಡು ಆತನನ್ನು ವಶಕ್ಕೆ ಪಡೆದು ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯವರ ಎದುರು ಹಾಜರುಪಡಿಸಿ ವೈದ್ಯಕೀಯ ತಪಾಸಣೆಗೊಳಪಡಿಸಿದಾಗ ಸರ್ಫರಾಜ್ ಮಾದಕ ವಸ್ತುವಾದ ಗಾಂಜಾ ಸೇವಿಸಿರುವುದಾಗಿ ವೈದ್ಯರು ದೃಢ ಪತ್ರವನ್ನು ನೀಡಿರುತ್ತಾರೆ ಎನ್ನಲಾಗಿದೆ.
ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಕಲಂ: 27 (b) NDPS Act ರಂತೆ ಪ್ರಕರಣ ದಾಖಲಾಗಿದೆ.