ಕುಂದಾಪುರ: ದಿನಾಂಕ 07/09/2023 (ಹಾಯ್ ಉಡುಪಿ ನ್ಯೂಸ್) ಕಸಬಾ ಗ್ರಾಮದ ಮೀನು ಮಾರುಕಟ್ಟೆ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಆಟ ನಡೆಸುತ್ತಿದ್ದ ವ್ಯಕ್ತಿಯನ್ನು ಕುಂದಾಪುರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ವಿನಯ್ ಎಮ್ ಕೊರ್ಲಹಳ್ಳಿ ಅವರು ಬಂಧಿಸಿದ್ದಾರೆ.
ಕುಂದಾಪುರ ಪೊಲೀಸ್ ಠಾಣೆ ಪೊಲೀಸ್ ಉಪ ನಿರೀಕ್ಷಕರಾದ ವಿನಯ್ ಎಮ್ ಕೊರ್ಲಹಳ್ಳಿ (ಕಾ.ಸು) ಅವರು ದಿನಾಂಕ:05-09-2023ರಂದು ರೌಂಡ್ಸ್ ಕರ್ತವ್ಯದಲ್ಲಿರುವಾಗ ಕುಂದಾಪುರ ತಾಲೂಕು ಕಸಬಾ ಗ್ರಾಮದ ಮೀನು ಮಾರ್ಕೆಟ್ ಬಳಿ ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿ ಯೋರ್ವ ಮಟ್ಕಾ ಜುಗಾರಿ ಆಟ ಆಡಿಸುತ್ತಿರುವುದಾಗಿ ಸಾರ್ವಜನಿಕರಿಂದ ಮಾಹಿತಿ ಬಂದಂತೆ ಕೂಡಲೇ ಸ್ಥಳಕ್ಕೆ ಧಾಳಿ ನಡೆಸಿದಾಗ ಅಲ್ಲಿ ಸೇರಿದ್ದ ಸಾರ್ವಜನಿಕರು ಓಡಿ ಹೋಗಿದ್ದು, ಅವರೊಂದಿಗೆ ಮಟ್ಕಾ ಜುಗಾರಿ ಆಟ ನಡೆಸುತ್ತಿದ್ದ ವ್ಯಕ್ತಿಯನ್ನು ಪೊಲೀಸ್ ಸಿಬ್ಬಂದಿಯವರ ಸಹಾಯದಿಂದ ಹಿಡಿದು ಬಂಧಿಸಿ ಹೆಸರು ವಿಳಾಸ ವಿಚಾರಿಸಿದಾಗ ತನ್ನ ಹೆಸರು ಸತೀಶ ಖಾರ್ವಿ (45), ವಾಸ: ಖಾರ್ವಿ ಮೇಲ್ಕೇರಿ, ಕುಂದಾಪುರ ಕಸಬಾ ಗ್ರಾಮ, ಎಂದು ತಿಳಿಸಿದ್ದು ಆತನ ಬಳಿ ಇದ್ದ ಮಟ್ಕಾ ಜುಗಾರಿ ಆಟಕ್ಕೆ ಸಂಬಂದಿಸಿದ ನಗದು ರೂಪಾಯಿ 1100 /- ರೂಪಾಯಿ ಹಾಗೂ ಮಟ್ಕಾ ಸಂಖ್ಯೆ ಬರೆದ ಚೀಟಿ-1, ಮಟ್ಕಾ ಬರೆಯಲು ಉಪಯೋಗಿಸಿದ ಬಾಲ್‌ಪೆನ್ನು-1 ನ್ನು ಸ್ವಾಧೀನ ಪಡಿಸಿಕೊಂಡಿರುತ್ತಾರೆ .
ಈ ಬಗ್ಗೆ ಕುಂದಾಪುರ ಪೊಲೀಸ್‌ಠಾಣೆಯಲ್ಲಿ ಕಲಂ: 78(I), (III) ಕರ್ನಾಟಕ ಪೊಲೀಸ್ ಕಾಯ್ದೆ ಯಂತೆ ಪ್ರಕರಣ ದಾಖಲಾಗಿದೆ.