ಪಡುಬಿದ್ರಿ: ದಿನಾಂಕ :07-09-2023(ಹಾಯ್ ಉಡುಪಿ ನ್ಯೂಸ್) ನಂದಿಕೂರು ಗ್ರಾಮದ ಇಂಡಸ್ಟ್ರಿಯಲ್ ಏರಿಯಾ ದಲ್ಲಿ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಯುವಕನನ್ನು ಪಡುಬಿದ್ರಿ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಪ್ರಸನ್ನ ಎಂ.ಎಸ್ ರವರು ಬಂಧಿಸಿದ್ದಾರೆ.
ಪಡುಬಿದ್ರಿ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಪ್ರಸನ್ನ ಎಂ.ಎಸ್ ಅವರು ದಿನಾಂಕ:04-09-2023 ರಂದು ಕಾಪು ತಾಲೂಕು ನಂದಿಕೂರು ಗ್ರಾಮದ ಇಂಡಸ್ಟ್ರಿಯಲ್ ಏರಿಯಾದಲ್ಲಿ ರೌಂಡ್ಸ್ ನಲ್ಲಿರುವಾಗ ರಕ್ಷಿತ್ ಶೆಟ್ಟಿ(29) ಎಂಬಾತನು ಯಾವುದೋ ಅಮಲಿನಲ್ಲಿದ್ದವನಂತೆ ತೂರಾಡುತ್ತಿದ್ದು, ಅವನು ಯಾವುದೋ ಮಾದಕ ಪದಾರ್ಥ ಸೇವಿಸಿರಬಹುದು ಎಂಬ ಬಗ್ಗೆ ಅನುಮಾನಗೊಂಡು ಆತನನ್ನು ಬಂಧಿಸಿ ವಶಕ್ಕೆ ಪಡೆದುಕೊಂಡು ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಯ ಫೊರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯಾಧಿಕಾರಿಯವರ ಎದುರು ಹಾಜರುಪಡಿಸಿ ವೈದ್ಯಕೀಯ ತಪಾಸಣೆಗೊಳಪಡಿಸಿದ್ದು,ರಕ್ಷಿತ್ ಶೆಟ್ಟಿಯು ಮಾದಕ ವಸ್ತುವಾದ ಗಾಂಜಾ ಸೇವಿಸಿರುವುದಾಗಿ ದಿನಾಂಕ 06/09/2023 ರಂದು ವೈದ್ಯರು ದೃಢಪತ್ರವನ್ನು ನೀಡಿರುತ್ತಾರೆ ಎನ್ನಲಾಗಿದೆ.
ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಕಲಂ: 27(b) NDPS Act ರಂತೆ ಪ್ರಕರಣ ದಾಖಲಾಗಿದೆ.