- ಹೆಬ್ರಿ: ದಿನಾಂಕ:18/09/2023 (ಹಾಯ್ ಉಡುಪಿ ನ್ಯೂಸ್) ವರಂಗ ಪೇಟೆಯ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಆಟ ನಡೆಸುತ್ತಿದ್ದ ವ್ಯಕ್ತಿಯನ್ನು ಹೆಬ್ರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
- ಹೆಬ್ರಿ ತಾಲೂಕು ವರಂಗ ಗ್ರಾಮದ ವರಂಗ ಪೇಟೆಯ ಆಟೋರಿಕ್ಷಾ ನಿಲ್ದಾಣದ ಬಳಿಯ ಪಕ್ಕದಲ್ಲಿನ ಸಾರ್ವಜನಿಕ ಸ್ಥಳದಲ್ಲಿ ಓರ್ವ ವ್ಯಕ್ತಿಯು ಮಟ್ಕಾ ಜುಗಾರಿ ಆಟ ಆಡುತ್ತಿದ್ದಾನೆ ಎಂಬುದಾಗಿ ಹೆಬ್ರಿ ಪೊಲೀಸ್ ಠಾಣೆಗೆ ಸಾರ್ವಜನಿಕರಿಂದ ಬಂದ ಖಚಿತ ಮಾಹಿತಿಯಂತೆ ಹೆಬ್ರಿ ಠಾಣೆಯ ಪೊಲೀಸರು ಸ್ಥಳಕ್ಕೆ ಬಂದು ನೋಡಿದಾಗ ಆರೋಪಿತ ರಮೇಶ ಪಡಿಯಾರ್ ಎಂಬಾತನು ವರಂಗ ಪೇಟೆಯ ಆಟೋ ರಿಕ್ಷಾ ನಿಲ್ದಾಣದ ಬಳಿಯ ಪಕ್ಕದಲ್ಲಿ ಸಾರ್ವಜನಿಕ ಸ್ಥಳದಲ್ಲಿ ನಿಂತುಕೊಂಡು ಒಂದು ರೂಪಾಯಿಗೆ 70 ಎಂದು ಮಟ್ಕಾ ಜೂಜಾಟಕ್ಕೆ ಜನರನ್ನು ಕರೆದು ಚೀಟಿಯ ಮೇಲೆ ಪೆನ್ನಿನಿಂದ ಅಂಕಿಗಳನ್ನು ಬರೆಯುತ್ತಿರುವುದನ್ನು ಗಮನಿಸಿ ದಾಳಿ ಮಾಡಿ ಆರೋಪಿತ ರಮೇಶ ಪಡಿಯಾರ್ ನನ್ನು ಬಂಧಿಸಿ ವಶಕ್ಕೆ ಪಡೆದು ಆತನ ಬಳಿ ಇದ್ದ 4480/- ರೂಪಾಯಿ ನಗದು, ಮಟ್ಕಾ ನಂಬ್ರ ಬರೆದ ಚೀಟಿ-1 ಹಾಗೂ ಬಾಲ್ ಪೆನ್ನು-1 ಇವುಗಳ ಬಗ್ಗೆ ವಿಚಾರಿಸಿದಾಗ ತನ್ನ ಸ್ವಂತ ಲಾಭಕ್ಕಾಗಿ ಸಾರ್ವಜನಿಕರಿಂದ ಮಟ್ಕಾ ಜೂಜಾಟದ ಬಗ್ಗೆ ಹಣ ಸಂಗ್ರಹಿಸುತ್ತಿರುವುದಾಗಿ ತಪ್ಪೊಪ್ಪಿ ಕೊಂಡಿರುತ್ತಾನೆ ಎನ್ನಲಾಗಿದೆ.
- ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ US 78 (1)(111) KP ACT ರಂತೆ ಪ್ರಕರಣ ದಾಖಲಾಗಿದೆ