- ಮಣಿಪಾಲ: ದಿನಾಂಕ: 27-09-2023 (ಹಾಯ್ ಉಡುಪಿ ನ್ಯೂಸ್) ಶಿವಳ್ಳಿ ಗ್ರಾಮದ ವಿದ್ಯಾರತ್ನ ನಗರದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ್ದ ಯುವಕನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
- ಮಣಿಪಾಲ ಪೊಲೀಸ್ ಠಾಣಾ ಸಿಬ್ಬಂದಿಯವರಾದ ಇಮ್ರಾನ್, ಅಬ್ದುಲ್ ರಜಾಕ್, ಚೆನ್ನೇಶ್ ಮತ್ತು ಮಂಜುನಾಥ ರವರು ದಿನಾಂಕ: 22-09-2023ರಂದು ಬೆಳಿಗ್ಗೆ 5-00 ಘಂಟೆಗೆ ರೌಂಡ್ಸ್ ಕರ್ತವ್ಯದಲ್ಲಿರುವಾಗ ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ವಿದ್ಯಾರತ್ನ ನಗರ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಸಂಶಯಾಸ್ಪದವಾಗಿ ವರ್ತಿಸುತ್ತಿದ್ದ ಅರುಣಿಮ್(20) ಎಂಬವನನ್ನು ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವ ಅನುಮಾನದ ಮೇರೆಗೆ ಬಂಧಿಸಿ ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದು, ಅದೇ ದಿನ ಅರುಣಿಮ್ ನನ್ನು ಗಾಂಜಾ ಸೇವನೆ ಮಾಡಿದ ಕುರಿತು ಪರೀಕ್ಷೆ ನಡೆಸುವ ಬಗ್ಗೆ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯರ ಮುಂದೆ ಹಾಜರುಪಡಿಸಿರುತ್ತಾರೆ ಎನ್ನಲಾಗಿದೆ.
- ಆಪಾದಿತ ಅರುಣಿಮ್ ಗಾಂಜಾ ಸೇವಿಸಿರುವ ಬಗ್ಗೆ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯಾಧಿಕಾರಿಗಳು ದಿನಾಂಕ: 27.09.2023 ರಂದು ದೃಢಪತ್ರವನ್ನು ನೀಡಿದ್ದಾರೆ ಎನ್ನಲಾಗಿದೆ.
- ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಕಲಂ: 27(b) NDPS Act ನಂತೆ ಪ್ರಕರಣ ದಾಖಲಾಗಿದೆ.