ಬೆಂಗಳೂರು: ದಿನಾಂಕ:28-09-2023(ಹಾಯ್ ಉಡುಪಿ ನ್ಯೂಸ್) ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಿಂದ ನೊಂದಿರುವ ಎರಡೂ ಪಕ್ಷಗಳ ಹಲವಾರು ನಾಯಕರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆಂದು
ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಇಂದು ಬೆಂಗಳೂರಿನಲ್ಲಿ ನಡೆದ ಜೆಡಿಎಸ್ ಮುಖಂಡರನ್ನು , ಕಾರ್ಯಕರ್ತರನ್ನು ಕಾಂಗ್ರೆಸ್ ಗೆ ಸೇರ್ಪಡೆ ಗೊಳಿಸುವ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.
ಜೆಡಿಎಸ್ ಹಾಗೂ ಬಿಜೆಪಿಯ ಹಲವರು ಮಾಜಿ ಶಾಸಕರು ಶೀಘ್ರ ದಲ್ಲೇ ಕಾಂಗ್ರೆಸ್ ಸೇರ್ಪಡೆ ಗೊಳ್ಳಲಿದ್ದಾರೆ ಎಂದು ಕೆಪಿಸಿಸಿ ಕಛೇರಿಯಲ್ಲಿ ನಡೆದ ಕಾರ್ಯಕ್ರಮದ ನಂತರ ತಿಳಿಸಿದ್ದಾರೆ.