
ಮಣಿಪಾಲ: ದಿನಾಂಕ 04.10.2023(ಹಾಯ್ ಉಡುಪಿ ನ್ಯೂಸ್) ಸರಳಬೆಟ್ಟಿನ ಮನೆಯೊಂದರಲ್ಲಿ ಅನೈತಿಕ ವೇಶ್ಯಾವಾಟಿಕೆಯಲ್ಲಿ ನಿರತರಾಗಿದ್ದ ಮೂವರನ್ನು ಮಣಿಪಾಲ ಪೊಲೀಸ್ ಠಾಣೆಯ ನಿರೀಕ್ಷಕರಾದ ದೇವರಾಜ್ ಟಿ ವಿ ಅವರು ಬಂಧಿಸಿದ್ದಾರೆ.
ಮಣಿಪಾಲ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕರಾದ ದೇವರಾಜ್ ಟಿ.ವಿ ಅವರು ದಿನಾಂಕ: 02-10-2023 ರಂದು ಠಾಣೆಯಲ್ಲಿರುವಾಗ ಉಡುಪಿ ತಾಲೂಕು ಹೆರ್ಗಾ ಗ್ರಾಮದಲ್ಲಿರುವ ಮನೆಯೊಂದರಲ್ಲಿ ಅನೈತಿಕ ವೇಶ್ಯಾವಾಟಿಕೆ ನಡೆಯುತ್ತಿರುವುದಾಗಿ ಸಾರ್ವಜನಿಕರಿಂದ ಬಂದ ಖಚಿತ ಮಾಹಿತಿಯಂತೆ ಮಾನ್ಯ ಪೊಲೀಸ್ ಉಪಾಧೀಕ್ಷಕರು ಉಡುಪಿ ಉಪ ವಿಭಾಗ ಅವರ ಮಾರ್ಗದರ್ಶನ ಪಡೆದುಕೊಂಡು ಕೂಡಲೇ ಠಾಣೆಯ ಸಿಬ್ಬಂದಿಗಳೊಂದಿಗೆ ಹೆರ್ಗಾ ಗ್ರಾಮದ ಸರಳಬೆಟ್ಟಿನ ಮನೆಗೆ ದಾಳಿ ನಡೆಸಿದಾಗ ಅಲ್ಲಿ ಅನೈತಿಕ ವೇಶ್ಯಾವಟಿಕೆಯಲ್ಲಿ ತೊಡಗಿದ್ದವರನ್ನು ಬಂಧಿಸಿ ವಶಕ್ಕೆ ಪಡೆದು ವಿಚಾರಣೆ ನಡೆಸಿ ಅವರ ವಶದಲ್ಲಿದ್ದ 2 ಮೊಬೈಲ್ ಪೋನ್‌ಗಳು, ನಗದು 15000/- ರೂ, ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.
ಅಕ್ರಮ ಹಣಗಳಿಸುವ ಉದ್ದೇಶದಿಂದ ಹುಡುಗಿಯರನ್ನು ಪುಸಲಾಯಿಸಿ ಕರೆ ತಂದು ಅವರಿಗೆ ಬಲವಂತವಾಗಿ ಪುರುಷರನ್ನು ಒದಗಿಸಿ ಅನೈತಿಕ ಚಟುವಟಿಕೆ ನಡೆಸುತ್ತಿರುವ ಅಪಾದಿತರಾದ ಶಿವರಾಜ(38) ಮಂಡ್ಯ ಮತ್ತು ನಿಂಗಪ್ಪ ಅಂಬಿಗೇರಾ(29) ಬಾಗಲಕೋಟೆ ಎಂಬವರನ್ನು ಬಂಧಿಸಿ ವಶಕ್ಕೆ ಪಡೆದಿದ್ದು ಇನ್ನೊರ್ವ ಆಪಾದಿತ ನವೀನ್‌ಗೌಡ ಎಂಬಾತ ತಲೆಮರಿಸಿಕೊಂಡಿರುತ್ತಾನೆ ಎನ್ನಲಾಗಿದೆ.
ಈ ಬಗ್ಗೆ ಮಣಿಪಾಲ ಪೊಲೀಸ್‌ಠಾಣೆಯಲ್ಲಿ ಕಲಂ: 370 (A) (2) IPC & 3, 4, 5, 6, ITP ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ.