- ಕಾರ್ಕಳ: ದಿನಾಂಕ 12/10/2023 (ಹಾಯ್ ಉಡುಪಿ ನ್ಯೂಸ್) ಬೆಳ್ಮಣ್ ಬಸ್ಸು ನಿಲ್ದಾಣದ ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಡಿಕೊಂಡು ಸಾರ್ವಜನಿಕ ಶಾಂತಿ ಭಂಗ ಮಾಡಿದ ಇಬ್ಬರನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
- ಕಾರ್ಕಳ ತಾಲೂಕು ಬೆಳ್ಮಣ್ ಗ್ರಾಮದ ಬೆಳ್ಮಣ್ ಬಸ್ಸು ನಿಲ್ದಾಣದ ಬಳಿ ದಿನಾಂಕ:10-10-2023ರಂದು ಸಾರ್ವಜನಿಕ ಸ್ಥಳದಲ್ಲಿ ಆರೋಪಿಗಳಾದ ಪ್ರಶಾಂತ್ ಮತ್ತು ಸುಂದರ ಎಂಬವರು ಬಸ್ಸಿನ ಟೈಮಿಂಗ್ಸ್ ವಿಚಾರದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಕೈಗಳಿಂದ ಪರಸ್ಪರ ಹೊಡೆದಾಡಿಕೊಂಡು ಸಾರ್ವಜನಿಕರ ಶಾಂತಿ ನೆಮ್ಮದಿಗೆ ಭಂಗವುಂಟು ಮಾಡಿರುತ್ತಾರೆ ಎನ್ನಲಾಗಿದೆ.
- ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ: 160 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.