ಬೆಳಗಾವಿ: ದಿನಾಂಕ:13-10-2023(ಹಾಯ್ ಉಡುಪಿ ನ್ಯೂಸ್)
ಕಲಬುರ್ಗಿ ಜಿಲ್ಲೆಯ ಹಿರಿಯ ಪತ್ರಕರ್ತ ಪಿ.ಎಂ.ಮಣ್ಣೂರ್ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಪತ್ರಕರ್ತ ಮಣ್ಣೂರ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗಿನ ಜಾವ ಮಣ್ಣೂರ್ ವಿಧಿವಶರಾಗಿದ್ದಾರೆ.
ಅವರು ಸತ್ಯಕಾಮ ಕನ್ನಡ ದಿನ ಪತ್ರಿಕೆಯ ಸಂಪಾದಕರಾಗಿ ಕಾರ್ಯ ನಿರ್ವಹಿಸಿದ್ದರು. ಜಿಲ್ಲೆಯ ಸಾಹಿತ್ಯ ರಂಗದಲ್ಲೂ ಪತ್ರಕರ್ತ ಪಿ.ಎಂ. ಮಣ್ಣೂರ್ ಗುರುತಿಸಿಕೊಂಡಿದ್ದರು. 371( ಜೆ) ಹೋರಾಟದಲ್ಲಿ ಮಾಜಿ ಸಚಿವ ದಿವಂಗತ ವೈಜನಾಥ್ ಪಾಟೀಲ್ ನೇತೃತ್ವದ ಹೋರಾಟದಲ್ಲಿ ಸಕ್ರೀಯವಾಗಿ ಭಾಗವಹಿಸಿದ್ದರು .ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿಯೂ ಪತ್ರಕರ್ತ ಮಣ್ಣೂರ್ ಕೆಲಸ ಮಾಡಿದ್ದರು. ಮೃತರ ಅಂತ್ಯಕ್ರಿಯೆ ನಾಳೆ ಕಲಬುರ್ಗಿಯಲ್ಲಿ ನಡೆಯಲಿದೆ.