ಉಡುಪಿ: ದಿನಾಂಕ:14-10-2023(ಹಾಯ್ ಉಡುಪಿ ನ್ಯೂಸ್) ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದಿಂದ ಬನ್ನಂಜೆಯಲ್ಲಿರುವ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸು ನಿಲ್ದಾಣದ ಕುಂದು ಕೊರತೆಗಳ ಬಗ್ಗೆ ಉಡುಪಿ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು ಎಂದು ಕರವೇ ಜಿಲ್ಲಾಧ್ಯಕ್ಷ ಸುಜಯ ಪೂಜಾರಿ ತಿಳಿಸಿದ್ದಾರೆ.
ಉಡುಪಿಯ ಬನ್ನಂಜೆಯಲ್ಲಿರುವ ಕರ್ನಾಟಕ ಸಾರಿಗೆ ಸಂಸ್ಥೆಯ ಪ್ರಯಾಣಿಕರ ಬಸ್ಸು ತಂಗುದಾಣದಲ್ಲಿ ಪ್ರಯಾಣಿಕರ ಉಪಯೋಗಕ್ಕೆ ಎ. ಟಿ. ಎಂ. ತೆರೆಯುವಂತೆ ಮತ್ತು ಸುಸಜ್ಜಿತ ಹೋಟೆಲ್ ವ್ಯವಸ್ಥೆ ಇಲ್ಲದೇ, ಹೊರಗಿನಿಂದ ಆಹಾರವನ್ನು ತಂದು ಶೌಚಾಲಯದ ಹತ್ತಿರ ಪೂರೈಸುತ್ತಿದ್ದು, ಇದರ ಬಗ್ಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಯವರಾದ ಡಾ. ಕೆ. ವಿದ್ಯಾಕುಮಾರಿಯವರಿಗೆ ಮನವರಿಕೆ ಮಾಡಿ, ಮನವಿ ನೀಡಲಾಯಿತು. ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯ ಮನವಿಗೆ ಸ್ಪಂದಿಸಿ, ಅಂಗಡಿ ಮುಂಗಟ್ಟುಗಳ ನಾಮಫಲಕದಲ್ಲಿ ಕನ್ನಡ ಕಡ್ಡಾಯಗೊಳಿಸುವಂತೆ ಸುತ್ತೋಲೆ ಹೊರಡಿಸಿದ್ದಕ್ಕೆ, ಜಿಲ್ಲಾಧಿಕಾರಿಗಳಿಗೆ ಹೂಗುಚ್ಛ ನೀಡಿ ಅಭಿನಂದಿಸಲಾಯಿತು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾಧ್ಯಕ್ಷ ರಾದ ಸುಜಯ ಪೂಜಾರಿ ತಿಳಿಸಿದ್ದಾರೆ .
ಈ ಸಂಧರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ.ಜಿಲ್ಲಾ ಗೌರವಾಧ್ಯಕ್ಷರಾದ ಸುಂದರ್ ಎ. ಬಂಗೇರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ರಾಘವೇಂದ್ರ ನಾಯಕ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾದ ಗೀತಾ ಪಾಂಗಾಳ, ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷರಾದ ಜಯ ಪೂಜಾರಿ, ಜಿಲ್ಲಾ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿ ಸಂತೋಷ ಕುಲಾಲ್, ಜಿಲ್ಲಾ ಯುವ ಘಟಕದ ಉಪಾಧ್ಯಕ್ಷರಾದ ರೋಷನ್ ಬಂಗೇರ, ಜಿಲ್ಲಾ ಮಹಿಳಾ ಘಟಕದ ಉಪಾಧ್ಯಕ್ಷರಾದ ದೇವಕಿ ಬಾರ್ಕೂರ್, ಜಿಲ್ಲಾ ಕಾರ್ಮಿಕ ಘಟಕದ ಉಪಾಧ್ಯಕ್ಷ ಸಿದ್ದಣ್ಣ ಎಸ್. ಪುಜಾರಿ, ಮಹಿಳಾ ಕಾರ್ಯದರ್ಶಿಗಳಾದ ಅನುಷಾ ಆಚಾರ್ಯ ಪಳ್ಳಿ ಮತ್ತು ಸರಿತಾ, ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿ ಕೃಷ್ಣ ಪಾಂಗಾಳ, ಜಿಲ್ಲಾ ಮಹಿಳಾ ಸಂಘಟನಾ ಕಾರ್ಯದರ್ಶಿ ಜ್ಯೋತಿ, ಜಿಲ್ಲಾ ಮಹಿಳಾ ಸಹ ಸಾಂಸ್ಕೃತಿಕ ಕಾರ್ಯದರ್ಶಿಗಳಾದ ಜ್ಯೋತಿ ಆರ್ ಮತ್ತು ಚಂದ್ರಕಲಾ ಉಪಸ್ಥಿತರಿದ್ದರು ಎಂದು ಸುಜಯ ಪೂಜಾರಿ ತಿಳಿಸಿದ್ದಾರೆ.