- ಕುಂದಾಪುರ: ದಿನಾಂಕ 30/10/2023 (ಹಾಯ್ ಉಡುಪಿ ನ್ಯೂಸ್) ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ದಂಧೆ ನಡೆಸುತ್ತಿದ್ದ ವ್ಯಕ್ತಿಯನ್ನು ಕುಂದಾಪುರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ವಿನಯ್ ಎಮ್ ಕೊರ್ಲಹಳ್ಳಿ ಅವರು ಬಂಧಿಸಿದ್ದಾರೆ.
- ಕುಂದಾಪುರ ಪೊಲೀಸ್ ಠಾಣೆ ಪೊಲೀಸ್ ಉಪ ನಿರೀಕ್ಷಕರಾದ (ಕಾ&ಸಾ) ವಿನಯ್ ಎಮ್ ಕೊರ್ಲಹಳ್ಳಿ ಅವರಿಗೆ ದಿನಾಂಕ :29-10-2023 ರಂದು ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಆಡುತ್ತಿರುವುದಾಗಿ ಸಾರ್ವಜನಿಕರಿಂದ ಮಾಹಿತಿ ಬಂದ ಮೇರೆಗೆ ಕೂಡಲೇ ಮಾಹಿತಿ ಬಂದ ಸ್ಥಳಕ್ಕೆ ದಾಳಿ ನಡೆಸಿ ಮಟ್ಕಾ ಜುಗಾರಿ ಆಟ ನಡೆಸುತ್ತಿದ್ದ ಭಾಸ್ಕರ (55), ಚಿತ್ತೂರು ಎಂಬಾತನನ್ನು ಬಂಧಿಸಿ ಆತನಿಂದ ಮಟ್ಕಾ ಜುಗಾರಿ ಆಟದಿಂದ ಸಂಗ್ರಹಿಸಿದ ನಗದು ರೂಪಾಯಿ 1200/-, ಬಾಲ್ ಪೆನ್ ಮತ್ತು ಮಟ್ಕಾ ನಂಬ್ರ ಬರೆದ ಚೀಟಿಯನ್ನು ಸ್ವಾಧೀನಪಡಿಸಿಕೊಂಡಿರುತ್ತಾರೆ.
- ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಕಲಂ: 78(I), (III) ಕರ್ನಾಟಕ ಪೊಲೀಸ್ ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ.