Spread the love

ಉಡುಪಿ: ದಿನಾಂಕ 12/11/2023 (ಹಾಯ್ ಉಡುಪಿ ನ್ಯೂಸ್) ಉಡುಪಿ ನಗರ ಸಭಾ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ಭಿತ್ತಿಪತ್ರ ಆಂಟಿಸುತ್ತಿರುವವರ ಮೇಲೆ ಉಡುಪಿ ನಗರ ಸಭಾ ಪೌರಾಯುಕ್ತರು ನೀಡಿರುವ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕ ಹಿತಾಸಕ್ತಿಗೆ ಭಂಗ ತರುವಂತಹ ಅನಧೀಕೃತ ಬ್ಯಾನರ್, ಪೋಸ್ಟರ್ ಹಾಗೂ ಭಿತ್ತಿ ಪತ್ರಗಳನ್ನು ಆಂಟಿಸುತ್ತಿರುವ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ, ಕರ್ನಾಟಕ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಉಡುಪಿ ನಗರ ಸಭೆಯ ಪೌರಾಯುಕ್ತರು ಉಡುಪಿ ನಗರ ಠಾಣೆಗೆ ನೀಡಿರುವ ದೂರಿನಂತೆ ದೂರು ದಾಖಲಾಗಿದೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಕಲಂ: 3 KARNATAKA OPEN PLACE DISFIGUREMENT ACT  1981ರಂತೆ ಪ್ರಕರಣ ದಾಖಲಾಗಿದೆ.

error: No Copying!