ಪಡುಬಿದ್ರಿ: ದಿನಾಂಕ:18-11-2023 (ಹಾಯ್ ಉಡುಪಿ ನ್ಯೂಸ್) ಪಂಚಾಯತ್ ಅಭಿವೃದ್ಧಿ ಅಧಿಕಾರಿಯೋರ್ವರಿಗೆ ಪಂಚಾಯತ್ ಸದಸ್ಯ ರೋರ್ವರು ಬೆದರಿಕೆ ಹಾಕಿರುವ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಉಡುಪಿ ಕಾಪು ತಾಲೂಕು ನಡ್ಸಾಲು ಗ್ರಾಮದ ಪಡುಬಿದ್ರಿ ಗ್ರಾಮ ಪಂಚಾಯತ್‌ನಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮಂಜುನಾಥ (43) ರವರು ದಿನಾಂಕ 17/11/2023 ರಂದು ತನ್ನ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸಿಕೊಂಡಿರುವಾಗ ಪಡುಬಿದ್ರಿ ಗ್ರಾಮ ಪಂಚಾಯತ್‌ನ ಸದಸ್ಯ ಮಯ್ಯದ್ದಿ ಎಂಬುವವರು ಕಛೇರಿಗೆ ನುಗ್ಗಿ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿ ಬೆದರಿಕೆ ಹಾಕಿರುತ್ತಾರೆ ಎಂದು ಮಂಜುನಾಥರವರು ಪೊಲೀಸರಿಗೆ ದೂರನ್ನು ನೀಡಿದ್ದಾರೆ .
ಅವರು ನೀಡಿದ ದೂರಿನಂತೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಕಲಂ: 504, 506, 353, 332 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.