- ಮಣಿಪಾಲ: ದಿನಾಂಕ 24/11/2023 (ಹಾಯ್ ಉಡುಪಿ ನ್ಯೂಸ್) ಮಣಿಪಾಲದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿ ಅಮಲಿನಲ್ಲಿದ್ದ ಮೂವರು ಯುವಕರನ್ನು ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಅಕ್ಷಯ ಕುಮಾರಿ ಅವರು ಬಂಧಿಸಿದ್ದಾರೆ.
- ಮಣಿಪಾಲ ಪೊಲೀಸ್ ಠಾಣೆ ಪೊಲೀಸ್ ಉಪ ನಿರೀಕ್ಷಕರಾದ ಅಕ್ಷಯಾ ಕುಮಾರಿ ಅವರು ದಿನಾಂಕ : 20-11-2023. ರಂದು ರಾತ್ರಿ ರೌಂಡ್ಸ್ ಕರ್ತವ್ಯದಲ್ಲಿರುವಾಗ ಸಾರ್ವಜನಿಕ ಸ್ಥಳದಲ್ಲಿ ಶ್ರೇಯಸ್ (20) , ತರುಣ್ (20) ,ಸಲಿಮ್ (21) ಎಂಬವರು ಅಮಲಿನಲ್ಲಿದ್ದು ಗಾಂಜಾ ಸೇವನೆ ಮಾಡಿರುವ ಅನುಮಾನದ ಮೇರೆಗೆ ಮೂವರನ್ನೂ ಬಂಧಿಸಿ ವಶಕ್ಕೆ ಪಡೆದು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯರ ಮುಂದೆ ಹಾಜರುಪಡಿಸಿದ್ದಾರೆ.
- ಈ ಮೂವರೂ ಗಾಂಜಾ ಸೇವಿಸಿರುವ ಬಗ್ಗೆ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯಾಧಿಕಾರಿಗಳು ದಿನಾಂಕ 23/11/2023 ರಂದು ದೃಢಪತ್ರವನ್ನು ನೀಡಿರುತ್ತಾರೆ ಎನ್ನಲಾಗಿದೆ . ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಕಲಂ: 27(b) NDPS Act ರಂತೆ ಪ್ರಕರಣ ದಾಖಲಾಗಿದೆ.