ಬ್ರಹ್ಮಾವರ: ದಿನಾಂಕ : 28/11/2023 (ಹಾಯ್ ಉಡುಪಿ ನ್ಯೂಸ್) ಹೆಗ್ಗುಂಜೆ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಕೋಳಿ ಅಂಕ ನಡೆಸುತ್ತಿದ್ದವರನ್ನು ಪೊಲೀಸ್ ಉಪನಿರೀಕ್ಷಕರಾದ ನಾಸಿರ್ ಹುಸೇನ್ ರವರು ಬಂಧಿಸಿದ್ದಾರೆ.
ಶಂಕರನಾರಾಯಣ ಪೊಲೀಸ್ ಠಾಣೆ ಪೊಲೀಸ್ ಉಪ ನಿರೀಕ್ಷಕರಾದ ನಾಸಿರ್ ಹುಸೇನ್ ರವರು ದಿನಾಂಕ: 27-11-2023ರಂದು ಬ್ರಹ್ಮಾವರ ಪೊಲೀಸ್ ಠಾಣಾ ಸರಹದ್ದಿನ ಹೆಗ್ಗುಂಜೆ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಜನರು ಗುಂಪು ಸೇರಿಕೊಂಡು ಕೋಳಿ ಅಂಕ ಜುಗಾರಿ ನಡೆಸುತ್ತಿದ್ದಲ್ಲಿಗೆ ದಾಳಿ ನಡೆಸಿದ್ದಾರೆ .
ಪೊಲೀಸರು ಧಾಳಿ ನಡೆಸಿದಾಗ ಅಲ್ಲಿ ಸೇರಿದ್ದ ಸಾರ್ವಜನಿಕರು ತಾವು ತಂದ ಕೋಳಿಯೊಂದಿಗೆ ಓಡಿ ಹೋಗಿರುತ್ತಾರೆ ಎನ್ನಲಾಗಿದೆ . ಪೊಲೀಸರು ನಂತರ ವಿಚಾರಣೆ ನಡೆಸಿದಾಗ ಆರೋಪಿಗಳಾದ ಸಂತೋಷ, ಬಾಲ, ಜಗ್ಗ ಹಾಗೂ ಇತರರು ಸೇರಿ ಕೋಳಿ ಅಂಕ ನಡೆಸಿರುತ್ತಾರೆ ಎಂದು ತಿಳಿದು ಬಂದಿರುತ್ತದೆ ಎನ್ನಲಾಗಿದೆ .ಆರೋಪಿಗಳು ಅಕ್ರಮವಾಗಿ ತಮ್ಮ ಸ್ವಂತ ಲಾಭಕ್ಕೋಸ್ಕರ ಸಾರ್ವಜನಿಕ ಸ್ಥಳದಲ್ಲಿ ಕೋಳಿ ಅಂಕ ಜುಗಾರಿ ಆಟ ನಡೆಸಿರುವುದಾಗಿ ಕಂಡು ಬಂದಿರುವುದಾಗಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 223/2023 ಕಲಂ: 87, 93 KP ACT ರಂತೆ ಪ್ರಕರಣ ದಾಖಲಾಗಿರುತ್ತದೆ.