ಬೆಂಗಳೂರು: ದಿನಾಂಕ:01-12-2023(ಹಾಯ್ ಉಡುಪಿ ನ್ಯೂಸ್) ಸರಿಯಾಗಿ ಮೇಲ್ವಿಚಾರಣೆ ನಡೆಸದೆ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಮೈಸೂರಿನ ಹಿಂದಿನ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಪಿ.ರವಿ ಮತ್ತು ಮೈಸೂರು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರಾಜೇಶ್ವರಿ ಅವರನ್ನು ಆರೋಗ್ಯ ಇಲಾಖೆ ಅಮಾನತು ಗೊಳಿಸಿದೆ. ಮೈಸೂರಿನ ಮಾತಾ ನರ್ಸಿಂಗ್ ಹೋಮ್ ನಲ್ಲಿ ಹೆಣ್ಣು ಭ್ರೂಣ ಹತ್ಯೆಗಳನ್ನು ತಡೆಯುವಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪ ಇವರ ಮೇಲಿತ್ತು.