Spread the love

ಕುಂದಾಪುರ  : ದಿನಾಂಕ: 13/12/2023 (ಹಾಯ್ ಉಡುಪಿ ನ್ಯೂಸ್) ಬಸ್ರೂರು ಗ್ರಾಮದ ಹಟ್ಟಿಕುದ್ರು ಸರ್ಕಾರಿ ಹಾಡಿಯಲ್ಲಿ ಅಂದರ್ ಬಾಹರ್ ಜುಗಾರಿ ಆಟ ಆಡುತ್ತಿದ್ದ ಐವರನ್ನು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಪವನ್ ನಾಯಕ್ ಅವರು ಬಂಧಿಸಿದ್ದಾರೆ.

ಕುಂದಾಪುರ ಗ್ರಾಮಾಂತರ ಪೊಲೀಸ್‌ಠಾಣೆ ಪೊಲೀಸ್ ಉಪ ನಿರೀಕ್ಷಕರಾದ ಪವನ್ ನಾಯಕ್ ಅವರಿಗೆ ಕುಂದಾಪುರ ತಾಲೂಕು ಬಸ್ರೂರು ಗ್ರಾಮದ ಹಟ್ಟಿಕುದ್ರು ಮುಡುಕಿನ ಹಾರ ಎಂಬಲ್ಲಿರುವ ಸರ್ಕಾರಿ ಹಾಡಿಯಲ್ಲಿ ಕೆಲವು ವ್ಯಕ್ತಿಗಳು ಹಣವನ್ನು ಪಣವಾಗಿಟ್ಟು ತಮ್ಮ ಸ್ವಂತ ಲಾಭಕ್ಕಾಗಿ ಇಸ್ಪೀಟು ಎಲೆಗಳಿಂದ ಅಂದರ್ ಬಾಹರ್ ಎಂಬ ಇಸ್ಪೀಟು ಆಟವಾಡುತ್ತಿದ್ದಾರೆಂದು ಸಾರ್ವಜನಿಕರಿಂದ ಬಂದ  ಖಚಿತ ಮಾಹಿತಿ ಮೇರೆಗೆ ಸಿಬ್ಬಂದಿಗಳೊಂದಿಗೆ ಇಲಾಖಾ ಜೀಪಿನಲ್ಲಿ ಕೂಡಲೇ ಮಾಹಿತಿ ಸ್ಥಳಕ್ಕೆ ತಲುಪಿ ಮರೆಯಲ್ಲಿ ನಿಂತು ನೋಡಿದಾಗ 5 ಜನರು ಹಣವನ್ನು ಪಣವಾಗಿಟ್ಟು ಇಸ್ಪೀಟು ಎಲೆಗಳಿಂದ ಅಂದರ್ ಬಾಹರ್ ಜುಗಾರಿ ಆಟ ನಡೆಸುತ್ತಿದ್ದಲ್ಲಿಗೆ ದಾಳಿ ನಡೆಸಿ 5 ಜನರಾದ 1. ಅಣ್ಣಪ್ಪ,  2. ನಟೇಶ, 3. ನಟೇಶ ಪೂಜಾರಿ, 4. ಮೋಹನ ಮತ್ತು 5. ಪ್ರಸನ್ನ ಎಂಬವರನ್ನು ಸಿಬ್ಬಂದಿಯವರ ಸಹಾಯದಿಂದ ಬಂಧಿಸಿ ವಶಕ್ಕೆ ಪಡೆದುಕೊಂಡಿದ್ದಾರೆ.

ಇಸ್ಪೀಟ್‌ ಜುಗಾರಿ ಆಟಕ್ಕೆ ಬಳಸಿದ್ದ 1) ನಗದು ರೂ. 2,300/-, 2) ಬಿಳಿ ಬಣ್ಣದ ಪ್ಲಾಸ್ಟಿಕ್‌ ಚೀಲ – 01 ಮತ್ತು 3) 52 ಇಸ್ಪೀಟ್ ಎಲೆಗಳನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ.

ಈ ಬಗ್ಗೆ  ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ: 87 ಕೆ.ಪಿ ಆ್ಯಕ್ಟ್ ರಂತೆ ಪ್ರಕರಣ ದಾಖಲಾಗಿದೆ.

error: No Copying!