ಮಣಿಪಾಲ: ದಿನಾಂಕ: 28.12.2023 (ಹಾಯ್ ಉಡುಪಿ ನ್ಯೂಸ್) ಅನಂತನಗರದ ಸೋನಿಯಾ ಕ್ಲಿನಿಕ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿ ಅಮಲಿನಲ್ಲಿದ್ದ ಯುವಕನನ್ನು ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ದೇವರಾಜ್ ಟಿವಿ ರವರು ಬಂಧಿಸಿದ್ದಾರೆ.
ಮಣಿಪಾಲ ಪೊಲೀಸ್ ಠಾಣಾ ನಿರೀಕ್ಷರಾದ ದೇವರಾಜ ಟಿ ವಿ ರವರು ದಿನಾಂಕ : 25-12-2023ರಂದು ಠಾಣಾ ಸಿಬ್ಬಂದಿಗಳ ಜೊತೆ ರೌಂಡ್ಸ್ ಕರ್ತವ್ಯದಲ್ಲಿರುವಾಗ ಮಣಿಪಾಲ ಠಾಣಾ ವ್ಯಾಪ್ತಿಯ ಮಣಿಪಾಲದ ಅನಂತನಗರದ ಸೋನಿಯಾ ಕ್ಲಿನಿಕ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಶ್ರೇಯಸ್ (23) ಉಡುಪಿ ಎಂಬವನನ್ನು ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವ ಅನುಮಾನದ ಮೇರೆಗೆ ಬಂಧಿಸಿ ವಶಕ್ಕೆ ಪಡೆದಿದ್ದಾರೆ .
ಆತ ಗಾಂಜಾ ಸೇವನೆ ಮಾಡಿದ ಕುರಿತು ಪರೀಕ್ಷೆ ನಡೆಸುವ ಬಗ್ಗೆ ಮಣಿಪಾಲ ಕೆ ಎಂ ಸಿ ಪೊರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯರ ಮುಂದೆ ಹಾಜರುಪಡಿಸಿದ್ದು ಆರೋಪಿ ಶ್ರೇಯಸ್ (23) ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿರುತ್ತದೆ ಎಂಬುದಾಗಿ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯಾಧಿಕಾರಿಗಳು ದಿನಾಂಕ: 27.12.2023 ರಂದು ದೃಢಪತ್ರವನ್ನು ನೀಡಿರುತ್ತಾರೆ ಎನ್ನಲಾಗಿದೆ .
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಕಲಂ: 27(b) NDPS ಕಾಯ್ದೆ ಯಂತೆ ಪ್ರಕರಣ ದಾಖಲಾಗಿದೆ.