- ಬ್ರಹ್ಮಾವರ: ದಿನಾಂಕ 06/01/2024 (ಹಾಯ್ ಉಡುಪಿ ನ್ಯೂಸ್) ಬಾರಕೂರಿನ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ್ದ ಯುವಕನನ್ನು ಬ್ರಹ್ಮಾವರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಪುಷ್ಪಾ ರವರು ಬಂಧಿಸಿದ್ದಾರೆ.
- ಬ್ರಹ್ಮಾವರ ಪೊಲೀಸ್ ಠಾಣೆ ಪೊಲೀಸ್ ಉಪ ನಿರೀಕ್ಷಕರಾದ ಶ್ರೀಮತಿ ಪುಷ್ಪಾ ಅವರಿಗೆ ಹೇರಾಡಿ ಗ್ರಾಮದ ಬಾರಕೂರು ಕಲ್ ಚಪ್ಪರದ ಬಳಿ ಸಾರ್ವಜನಿಕ ಸ್ಥಳದಲ್ಲಿ ಓರ್ವ ವ್ಯಕ್ತಿ ಗಾಂಜಾದಂತಹ ಅಮಲು ಪದಾರ್ಥ ಸೇವನೆ ಮಾಡಿರುವ ಬಗ್ಗೆ ಮಾಹಿತಿದಾರರಿಂದ ದೊರೆತ ಮಾಹಿತಿಯಂತೆ ಕೂಡಲೇ ಠಾಣೆಯ ಸಿಬ್ಬಂದಿಯವರ ಜೊತೆಯಲ್ಲಿ ಮಾಹಿತಿ ಬಂದ ಸ್ಥಳಕ್ಕೆ ಹೋದಾಗ ಆರೋಪಿ ಮಹಮ್ಮದ್ ಸಲೀಂ, (31) ಎಂಬವನು ಅಮಲು ಪದಾರ್ಥ ಸೇವಿಸಿಕೊಂಡು ಅನುಮಾನಾಸ್ಪದವಾಗಿ ನಿಂತುಕೊಂಡಿದ್ದನು ಎನ್ನಲಾಗಿದೆ.
- ಆತನ ಬಾಯಿಯಿಂದ ಗಾಂಜಾದಂತಹ ವಾಸನೆ ಬರುತ್ತಿದ್ದು, ಆತನನ್ನು ಬಂಧಿಸಿ ವಶಕ್ಕೆ ತೆಗೆದುಕೊಂಡು ಅದೇ ದಿನ ಮಣಿಪಾಲ ಕೆಎಂಸಿ ಆಸ್ಪತ್ರೆಯ ಫೊರೆನ್ಸಿಕ್ ಮೆಡಿಸಿನ್ ವಿಭಾಗದ ತಜ್ಞರ ಮುಂದೆ ಹಾಜರುಪಡಿಸಿ ವೈದ್ಯಕೀಯ ಪರೀಕ್ಷೆ ನಡೆಸಿದ್ದರು ಎನ್ನಲಾಗಿದೆ.
- ದಿನಾಂಕ 05.01.2024 ರಂದು ಮಣಿಪಾಲ ಕೆಎಂಸಿ ಆಸ್ಪತ್ರೆಯ ಫೊರೆನ್ಸಿಕ್ ಮೆಡಿಸಿನ್ ವಿಭಾಗದ ತಜ್ಞರ ವರದಿಯಲ್ಲಿ ಆರೋಪಿ ಮಹಮ್ಮದ್ ಸಲೀಂ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿರುತ್ತದೆ.
- ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಕಲಂ 27 (B) NDPS ACT ರಂತೆ ಪ್ರಕರಣ ದಾಖಲಾಗಿದೆ.