Spread the love

ಉಡುಪಿ: ದಿನಾಂಕ 06/01/2024 (ಹಾಯ್ ಉಡುಪಿ ನ್ಯೂಸ್) ನಗರದ ಮೀನು ಮಾರ್ಕೆಟ್ ಬಳಿಯ ಎಸ್.ಎಸ್.ರೆಸಿಡೆನ್ಸಿ ಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದವರನ್ನು ಉಡುಪಿ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಮಂಜಪ್ಪ ಡಿ.ಆರ್ ರವರು ಬಂಧಿಸಿದ್ದಾರೆ.

ಉಡುಪಿ ನಗರ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕರಾದ ಮಂಜಪ್ಪ ಡಿ.ಆರ್ ಅವರಿಗೆ ದಿನಾಂಕ : 05-01-2024ರಂದು ಮೂಡನಿಡಂಬೂರು ಗ್ರಾಮದ ಮೀನು ಮಾರ್ಕೆಟ್ ಬಳಿ ಇರುವ ಕಾರ್ತಿಕ್ ಟವರ್‌ನಲ್ಲಿರುವ ಎಸ್.ಎಸ್ ರೆಸಿಡೆನ್ಸಿಯಲ್ಲಿ ಮಹಿಳೆಯರನ್ನು ಕರೆಸಿ ಅಕ್ರಮವಾಗಿ ಅನೈತಿಕ  ವೇಶ್ಯಾವಾಟಿಕೆ  ನಡೆಸುತ್ತಿರುವುದಾಗಿ ಗುಪ್ತ ಮಾಹಿತಿ ಬಂದಿದೆ ಎನ್ನಲಾಗಿದೆ.

ಬಂದ  ಮಾಹಿತಿಯಂತೆ ಕೂಡಲೇ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿದ್ದು ಅಲ್ಲಿ ಅನೈತಿಕ ವೇಶ್ಯಾವಟಿಕೆಯಲ್ಲಿ ತೊಡಗಿದ್ದ ಮಧು ಹಾಗೂ ರೂಂ ಬಾಯ್ ಸುಕುಮಾರ್  ಎಂಬವರನ್ನು ವಶಕ್ಕೆ ಪಡೆದು, ಅವರ ವಶದಲ್ಲಿದ್ದ ಸೊತ್ತುಗಳನ್ನು ವಶಪಡಿಸಿಕೊಂಡಿರುತ್ತಾರೆ .

ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಕಲಂ: 370 ಐಪಿಸಿ & 3,4,5,6,7 ಐಟಿಪಿ ಆಕ್ಟ್ ರಂತೆ ಪ್ರಕರಣ ದಾಖಲಾಗಿದೆ.

error: No Copying!