Spread the love
  • ಉಡುಪಿ: ದಿನಾಂಕ:12-01-2024(ಹಾಯ್ ಉಡುಪಿ ನ್ಯೂಸ್) ಆಶೀರ್ವಾದ ಆಟೋ ಸ್ಟ್ಯಾಂಡ್ ಹಿಂಬದಿಯಲ್ಲಿ ಮಟ್ಕಾ ಜುಗಾರಿ ಆಟ ನಡೆಸುತ್ತಿದ್ದ ವ್ಯಕ್ತಿಯನ್ನು ಉಡುಪಿ ನಗರ ಪೊಲೀಸ್ ಠಾಣೆಯ ಪಿಎಸ್ಐ ಯವರಾದ ಶ್ರೀ ಭರತೇಶ ಕಂಕಣವಾಡಿ ಅವರು ಬಂಧಿಸಿದ್ದಾರೆ.
  • ಉಡುಪಿ ನಗರ ಪೊಲೀಸ್‌ ಠಾಣೆ ಪಿಎಸ್ಐ ಯವರಾದ ಶ್ರೀ ಭರತೇಶ ಕಂಕಣವಾಡಿ ಅವರು ದಿನಾಂಕ: 09/01/2024 ರಂದು ರೌಂಡ್ಸ್‌  ಕರ್ತವ್ಯದಲ್ಲಿರುವಾಗ ಆಶೀರ್ವಾದ್‌ ಆಟೋ ಸ್ಟಾಂಡ್‌  ಹಿಂಬದಿಯ ಸಾರ್ವಜನಿಕ ಸ್ಥಳದಲ್ಲಿ ಓರ್ವ ವ್ಯಕ್ತಿಯು  ಮಟ್ಕಾ ಜುಗಾರಿ ಆಟದ ಬಗ್ಗೆ ಸಾರ್ವಜನಿಕರಿಂದ  ಹಣ  ಸಂಗ್ರಹಿಸುತ್ತಿರುವುದಾಗಿ ಸಾರ್ವಜನಿಕರಿಂದ ಖಚಿತ ಮಾಹಿತಿ ದೊರೆತ ಮೇರೆಗೆ ಸಿಬ್ಬಂದಿಯವರೊಂದಿಗೆ ಕೂಡಲೇ ಸ್ಥಳಕ್ಕೆ ದಾಳಿ ನಡೆಸಿ ಮಟ್ಕಾ ಜುಗಾರಿ ಆಟ ನಡೆಸುತ್ತಿದ್ದ ಆರೋಪಿ ರಾಮಕೃಷ್ಣ  ಎಂಬಾತನನ್ನು ಬಂಧಿಸಿ ವಶಕ್ಕೆ ಪಡೆದುಕೊಂಡಿದ್ದಾರೆ .
  • ಆತನನ್ನು ವಿಚಾರಣೆ ನಡೆಸಿದಾಗ ತಾನು ತನ್ನ ಸ್ವಂತ ಲಾಭಕ್ಕಾಗಿ ಸಾರ್ವಜನಿಕರಿಂದ ಮಟ್ಕಾ ಜುಗಾರಿ ಆಟದ ಬಗ್ಗೆ ಹಣವನ್ನು ಸಂಗ್ರಹಿಸುತ್ತಿದ್ದುದಾಗಿ ತಿಳಿಸಿದ್ದಾನೆ ಎನ್ನಲಾಗಿದೆ.
  • , ಆತನ ವಶದಿಂದ ಮಟ್ಕಾ ಜುಗಾರಿ ಆಟಕ್ಕೆ ಸಂಗ್ರಹಿಸಿದ ನಗದು ರೂ 1200/-, ಮಟ್ಕಾ ನಂಬ್ರ ಬರೆದ ಚೀಟಿ-1, ಬಾಲ್‌ಪೆನ್‌-1 ನ್ನು ಮುಂದಿನ ಕ್ರಮದ ಬಗ್ಗೆ ಸ್ವಾಧೀನಪಡಿಸಿಕೊಂಡಿರುತ್ತಾರೆ.
  • ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಕಲಂ: 78 (i) (iii) ಕರ್ನಾಟಕ ಪೊಲೀಸ್‌ ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ.

error: No Copying!