ಅಮಾಸೆಬೈಲು: ದಿನಾಂಕ 18/01/2024(ಹಾಯ್ ಉಡುಪಿ ನ್ಯೂಸ್) ಹೊಸಂಗಡಿ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜುಗಾರಿ ಆಡುತ್ತಿದ್ದ ನಾಲ್ವರನ್ನು ಅಮಾಸೆಬೈಲು ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಸಂಗೀತಾ ಅವರು ಬಂಧಿಸಿದ್ದಾರೆ.
ಅಮಾಸೆಬೈಲು ಪೊಲೀಸ್ ಠಾಣೆ ಪೊಲೀಸ್ ಉಪ ನಿರೀಕ್ಷಕರಾದ ಸಂಗೀತಾ ಅವರಿಗೆ ದಿನಾಂಕ:16-01-2024 ರಂದು ಹೊಸಂಗಡಿ ಗ್ರಾಮದ ಕಪ್ಪೆಹೊಂಡ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿಟ್ಟುಕೊಂಡು ಇಸ್ಪೀಟು ಜುಗಾರಿ ಆಟ ಆಡುತ್ತಿರುವ ಬಗ್ಗೆ ಸಾರ್ವಜನಿಕ ರಿಂದ ದೊರೆತ ಮಾಹಿತಿಯಂತೆ ಕೂಡಲೇ ದಾಳಿ ನಡೆಸಿ ಅಲ್ಲಿ ಇಸ್ಪೀಟ್ ಜುಗಾರಿ ಆಡುತ್ತಿದ್ದ ಆರೋಪಿಗಳಾದ 1)ನಿಂಗಯ್ಯ, 2) ಬಾಸ್ಕರ, 3) ಕರುಣಾಕರ, 4) ಸುಬ್ರಹ್ಮಣ್ಯ ಎಂಬವರನ್ನು ಬಂಧಿಸಿ ಅವರಿಂದ ಇಸ್ಪೀಟು ಜುಗಾರಿ ಆಟಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿಕೊಂಡಿರುತ್ತಾರೆ .
ಈ ಬಗ್ಗೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಕಲಂ: 87 KP Act ರಂತೆ ಪ್ರಕರಣ ದಾಖಲಾಗಿದೆ.