ಬೆಂಗಳೂರು: ದಿನಾಂಕ:19-01-2024(ಹಾಯ್ ಉಡುಪಿ ನ್ಯೂಸ್) ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಬಳಿಯ ಏರೋಸ್ಪೇಸ್ ಪಾರ್ಕ್ ನಲ್ಲಿ ಅತ್ಯಾಧುನಿಕ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರ ವನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟಿಸಿದರು.
ಸುಮಾರು 1600 ಕೋಟಿ ವೆಚ್ಚದಲ್ಲಿ 43 ಎಕರೆ ಪ್ರದೇಶದಲ್ಲಿ ಈ ಕೇಂದ್ರ ತಲೆ ಎತ್ತಿದೆ.ಭಾರತ ಮತ್ತು ವಿಶ್ವದಲ್ಲಿ ವಿಮಾನ ಯಾನ ವಲಯವನ್ನು ಬಲಪಡಿಸುವಲ್ಲಿ ಈ ಕೇಂದ್ರ ಪ್ರಮುಖ ಪಾತ್ರ ವಹಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.