Spread the love

ಕಲಬುರಗಿ: ದಿನಾಂಕ: 21-01-2024(ಹಾಯ್ ಉಡುಪಿ ನ್ಯೂಸ್) ಕೋಮು ದ್ವೇಷದ ನೆಲೆಗಟ್ಟಿನಲ್ಲಿ ಕಾಂಗ್ರೆಸ್ ನಾಯಕರ ಬಗ್ಗೆ ಕೆಟ್ಟದಾಗಿ ಪ್ರಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ ರವರು ನೀಡಿದ ದೂರಿನ ಮೇರೆಗೆ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಚಕ್ರವರ್ತಿ ಸೂಲಿಬೆಲೆ ಮೇಲೆ ಪ್ರಕರಣ ದಾಖಲಾಗಿದೆ.

ರಾಯಚೂರು ಜಿಲ್ಲೆಯ ಸಿರವಾರದಲ್ಲಿ ಈಚೆಗೆ ನಡೆದ ನಮೋ ಬ್ರಿಗೇಡ್ ಕಾರ್ಯಕ್ರಮದಲ್ಲಿ ಸಂಘಟನೆಯ ಪ್ರಮುಖ ಚಕ್ರವರ್ತಿ ಸೂಲಿಬೆಲೆ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ಎಂದು ಆರೋಪಿಸಲಾಗಿತ್ತು.

error: No Copying!