ಉಡುಪಿ : ದಿನಾಂಕ :06/02/2024 (ಹಾಯ್ ಉಡುಪಿ ನ್ಯೂಸ್) ನಗರದ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಬರೆಯುತ್ತಿದ್ದ ವ್ಯಕ್ತಿಯನ್ನು ನಗರ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪನಿರೀಕ್ಷಕರಾದ ವಿಜಯ ಸಿ ಅವರು ಬಂಧಿಸಿದ್ದಾರೆ.
ಉಡುಪಿ ನಗರ ಪೊಲೀಸ್ ಠಾಣೆ ಸಹಾಯಕ ಪೊಲೀಸ್ ಉಪ ನಿರೀಕ್ಷಕರಾದ ವಿಜಯ ಸಿ ಆವರು ರೌಂಡ್ಸ್ ಕರ್ತವ್ಯದಲ್ಲಿರುವಾಗ ಸಾರ್ವಜನಿಕ ಸ್ಥಳದಲ್ಲಿ ಓರ್ವ ವ್ಯಕ್ತಿಯು ಮಟ್ಕಾ ಜುಗಾರಿ ಆಟದ ಬಗ್ಗೆ ಹಣ ಸಂಗ್ರಹಿಸುತ್ತಿರುವುದಾಗಿ ದೊರೆತ ಸಾರ್ವಜನಿಕ ಮಾಹಿತಿ ಮೇರೆಗೆ ಕೂಡಲೇ ದಾಳಿ ನಡೆಸಿ ಮಟ್ಕಾ ಜುಗಾರಿ ಆಟ ನಡೆಸುತ್ತಿದ್ದ ಅಭಿಷೇಕ್ ಎಂಬಾತನನ್ನು ಬಂಧಿಸಿ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಆತನು ಮಟ್ಕಾ ಜುಗಾರಿ ಆಟಕ್ಕೆ ಸಂಗ್ರಹಿಸಿದ ನಗದು ರೂಪಾಯಿ 1420/-, ಮಟ್ಕಾ ನಂಬ್ರ ಬರೆದ ಚೀಟಿ, ಬಾಲ್ಪೆನ್ ಅನ್ನು ಸ್ವಾಧೀನಪಡಿಸಿಕೊಂಡಿರುತ್ತಾರೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಕಲಂ: 78 (i) (iii) Karnataka Police Act ರಂತೆ ಪ್ರಕರಣ ದಾಖಲಾಗಿದೆ .