Spread the love

ಹೆಬ್ರಿ: ದಿನಾಂಕ : 06/02/2024 (ಹಾಯ್ ಉಡುಪಿ ನ್ಯೂಸ್) ಸಾರ್ವಜನಿಕ ಸ್ಥಳದಲ್ಲಿ ಕೋಳಿ ಅಂಕ ಜುಗಾರಿ ನಡೆಸುತ್ತಿದ್ದ 12 ಮಂದಿಯನ್ನು ಹೆಬ್ರಿ ಪೊಲೀಸ್‌ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಮಹೇಶ್ ಟಿ.ಎಮ್ ಅವರು ಬಂಧಿಸಿದ್ದಾರೆ.

ಹೆಬ್ರಿ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಮಹೇಶ್ ಟಿ.ಎಮ್ ಅವರಿಗೆ ದಿನಾಂಕ:04-02-2024ರಂದು ಹೆಬ್ರಿಯ ಸಾರ್ವಜನಿಕ ಸ್ಥಳದಲ್ಲಿ ಕೆಲವರು ಹಣವನ್ನು ಪಣವಾಗಿಟ್ಟುಕೊಂಡು ಕೋಳಿ ಅಂಕ ನಡೆಸುತ್ತಿರುವ ಬಗ್ಗೆ ಸಾರ್ವಜನಿಕ ರಿಂದ ಬಂದ ಖಚಿತ ಮಾಹಿತಿ ಮೇರೆಗೆ ಕೂಡಲೇ ಠಾಣೆಯ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿದಾಗ ಸಾರ್ವಜನಿಕ ಸ್ಥಳದಲ್ಲಿ ಸುಮಾರು 15 ರಿಂದ 20 ಜನರು ಕೋಳಿಗಳ ಕಾಲಿಗೆ ಹರಿತವಾದ ಬಾಳುಗಳನ್ನು ಕಟ್ಟಿ ಅವುಗಳಿಗೆ ಹಿಂಸೆಯಾಗುವಂತೆ ಕಾಳಗಕ್ಕೆ ಬಿಟ್ಟು ವಿಜೇತ ಕೋಳಿಗಳ ಮೇಲೆ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಜೂಜಾಟ ಆಡುತ್ತಿದ್ದರು ಎನ್ನಲಾಗಿದೆ .

ಪೊಲೀಸ್ ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಆರೋಪಿಗಳಾದ 1)ರತ್ನಾಕರ 2)ವಿದ್ಯಾನಂದ 3)ನವೀನ 4)ರಾಘವೇಂದ್ರ 5)ಸಂದೀಪ 6)ಗುರುಕಿರಣ7)ಶಿವ ಕುಮಾರ8)ಶರಣ9)ಪ್ರಶಾಂತ 10)ರವೀಂದ್ರ 11)ಅಣ್ಣಪ್ಪ12)ಸತೀಶ ಎಂಬವರನ್ನು ಬಂಧಿಸಿ ವಶಕ್ಕೆ ಪಡೆದುಕೊಂಡಿದ್ದು ಉಳಿದವರು ಓಡಿ ಹೋಗಿರುತ್ತಾರೆ ಎನ್ನಲಾಗಿದೆ.

ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಕಲಂ: 87,93 ಕರ್ನಾಟಕ ಪೊಲೀಸ್‌ ಕಾಯಿದೆ ಯಂತೆ ಪ್ರಕರಣ ದಾಖಲಾಗಿದೆ.

error: No Copying!