Spread the love

ಬ್ರಹ್ಮಾವರ: ದಿನಾಂಕ :13-02-2024(ಹಾಯ್ ಉಡುಪಿ ನ್ಯೂಸ್) ವಾಲಿಬಾಲ್ ಪಂದ್ಯಾಟದಲ್ಲಿ ಅನುಮತಿ ಇಲ್ಲದೆ ತಡರಾತ್ರಿಯಲ್ಲಿ ಲೌಡ್ ಸ್ಪೀಕರ್ ಬಳಸಿದ ಆರೋಪದ ಮೇಲೆ ಇಬ್ಬರ ಮೇಲೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬ್ರಹ್ಮಾವರ ಪೊಲೀಸ್‌ ಠಾಣೆಯ ಪಿಎಸ್ಐ ಯವರಿಗೆ ದಿನಾಂಕ:10-02-2024ರಂದು ರಾತ್ರಿ ಸಾರ್ವಜನಿಕರು ಕರೆ ಮಾಡಿ ಹೊಸೂರು ಗ್ರಾಮದ ಕೆಳಕರ್ಜೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮೈದಾನದಲ್ಲಿ ಹೊನಲು ಬೆಳಕಿನ ವಾಲಿಬಾಲ್‌ ಪಂದ್ಯಾಟ ನಡೆಯುತ್ತಿದ್ದು ಅಲ್ಲಿ ಲೌಡ್‌ ಸ್ಪೀಕರ್‌ ಹಾಕಿ ವೀಕ್ಷಕ ವಿವರಣೆ ಮಾಡಿ ಸಾರ್ವಜನಿಕರಿಗೆ ಉಪದ್ರವಾಗುತ್ತಿರುವುದಾಗಿ ತಿಳಿಸಿರುತ್ತಾರೆ ಎನ್ನಲಾಗಿದೆ.

ಸಾರ್ವಜನಿಕರ ದೂರು ಬಂದ ಕೂಡಲೇ ಪಿಎಸ್‌ಐ ರವರು ಬ್ರಹ್ಮಾವರ ಪೊಲೀಸ್ ಠಾಣೆಯ ಸಿಬ್ಬಂದಿ ಸಂತೋಷ ಅವರನ್ನು ಸ್ಥಳಕ್ಕೆ ಕಳುಹಿಸಿದ್ದು ಅವರು ರಾತ್ರಿ 10:30 ಘಂಟೆಗೆ ಸ್ಥಳಕ್ಕೆ ಹೋಗಿ ನೋಡಿದಾಗ ಹೊಸೂರು ಗ್ರಾಮದ ಕೆಳಕರ್ಜೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮೈದಾನದಲ್ಲಿ ಹೊನಲು ಬೆಳಕಿನ ವಾಲಿಬಾಲ್‌ ಪಂದ್ಯಾಟದಲ್ಲಿ ಲೌಡ್‌ ಸ್ಪೀಕರ್‌ ಹಾಕಿ ವೀಕ್ಷಕ ವಿವರಣೆಯನ್ನು ತಡ ರಾತ್ರಿವರೆಗೂ ನಡೆಸುತ್ತಿದ್ದು, ಈ ಬಗ್ಗೆ ಪೊಲೀಸರು ಪಂದ್ಯಾಟದ ಆಯೋಜಕರ ಬಗ್ಗೆ ವಿಚಾರಿಸಿದಾಗ ಶಿವಕುಮಾರ ಕರ್ಜೆ ಎಂದು ತಿಳಿಸಿದ್ದು ಆತನಲ್ಲಿ ಸಕ್ಷಮ ಪ್ರಾಧಿಕಾರ ದಿಂದ ಪರವಾನಿಗೆ ಯಾ ಪೂರ್ವಾನುಮತಿ ಪಡೆದುಕೊಂಡಿದ್ದೀರಾ ಎಂದು ವಿಚಾರಿಸಿದಾಗ ಆರೋಪಿ ಶಿವಕುಮಾರ ಯಾವುದೇ ಪೂರ್ವಾನುಮತಿ ಅಥವಾ ಪರವಾನಿಗೆಯನ್ನು ಪಡೆದುಕೊಂಡಿರುವುದಿಲ್ಲ ಎಂದು ತಿಳಿಸಿದ್ದಾನೆ ಎನ್ನಲಾಗಿದೆ.

ಹೊನಲು ಬೆಳಕಿನ ಪಂದ್ಯಾಟದಲ್ಲಿ ಹಾಕಲಾದ ಲೌಡ್‌ಸ್ಪೀಕರ್‌ನ ಮಾಲಕರ ಬಗ್ಗೆ ವಿಚಾರಿಸಿದಾಗ ನವೀನ, ಜನನಿ ಸೌಂಡ್ಸ್ ಶಿವಪುರ ಎಂಬುವುದಾಗಿ ತಿಳಿಸಿರುತ್ತಾರೆ ಎನ್ನಲಾಗಿದೆ.

ಅರೋಪಿಗಳು ಯಾವುದೇ ಪರವಾನಿಗೆ ಇಲ್ಲದೇ ತಡ ರಾತ್ರಿವರೆಗೆ ದ್ವನಿವರ್ದಕವನ್ನು ಅತೀ ಕರ್ಕಶವಾಗಿ ಸಾರ್ವಜನಿಕರಿಗೆ ಉಪದ್ರವಾಗುವ ರೀತಿಯಲ್ಲಿ ಬಳಸಿ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿರುತ್ತಾರೆ ಎಂದು ದೂರಲಾಗಿದೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಅಪರಾಧ ಕ್ರಮಾಂಕ 42/2024 ಕಲಂ: 109 K P Act ರಂತೆ ಪ್ರಕರಣ ದಾಖಲಾಗಿದೆ.

error: No Copying!