- ಮಣಿಪಾಲ: ದಿನಾಂಕ: 15/02/2024(ಹಾಯ್ ಉಡುಪಿ ನ್ಯೂಸ್) ಮಣಿಪಾಲ ಪರಿಸರದಲ್ಲಿ ಗಾಂಜಾ ಸೇವನೆ ಮಾಡಿ ವಾಹನ ಅಪಘಾತ ನಡೆಸಿದ್ದ ಈರ್ವರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
- ಮಣಿಪಾಲ ಪೊಲೀಸ್ ಠಾಣೆಯ ಪ್ರಭಾರ ಕರ್ತವ್ಯದಲ್ಲಿದ್ದ ಹೆಚ್ ಸಿ ನವೀನ್ ರವರಿಗೆ ದಿನಾಂಕ :14-02-2024ರಂದು ಮಣಿಪಾಲ ಠಾಣಾ ವ್ಯಾಪ್ತಿಯ ಶಿವಳ್ಳಿ ಗ್ರಾಮದ ಮಣಿಪಾಲ ಫೋಸ್ಟ್ ಆಫೀಸ್ ಸರ್ಕಲ್ ಬಳಿ ಓರ್ವ ಸೆಕ್ಯುರಿಟಿ ಗಾರ್ಡ್‌ಗೆ KL-56 J-4554 ನೇ ಕಾರು ಅಪಘಾತಪಡಿಸಿದ ಬಗ್ಗೆ ಸಾರ್ವಜನಿಕರಿಂದ ಮಾಹಿತಿ ಬಂದಂತೆ ಕೂಡಲೇ ಸ್ಥಳಕ್ಕೆ ತೆರಳಿ ನೋಡಿದಾಗ ವಿವೇಕ (21) ಮತ್ತು ಮಹಮ್ಮದ್ (20) ಮಣಿಪಾಲ ಎಂಬೀರ್ವರು ಅಮಲಿನಲ್ಲಿದ್ದು, ಅವರು ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವ ಅನುಮಾನದ ಮೇರೆಗೆ ಅವರೀರ್ವರನ್ನು ಬಂಧಿಸಿ ವಶಕ್ಕೆ ಪಡೆದು ಗಾಂಜಾ ಸೇವನೆ ಮಾಡಿದ ಕುರಿತು ಪರೀಕ್ಷೆ ನಡೆಸಲು ಮಣಿಪಾಲ ಕೆ ಎಂ ಸಿ ಪೊರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯರ ಮುಂದೆ ಹಾಜರುಪಡಿಸಿದ್ದು ಆರೋಪಿ ವಿವೇಕ ಮತ್ತು ಮಹಮ್ಮದ್ ಇವರೀರ್ವರು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿರುತ್ತದೆ ಎಂದು ಮಣಿಪಾಲ ಕೆ ಎಂ ಸಿ ಪೊರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯಾಧಿಕಾರಿಗಳು ದಿನಾಂಕ 15/02/2024 ರಂದು ದೃಢಪತ್ರವನ್ನು ನೀಡಿರುತ್ತಾರೆ ಎನ್ನಲಾಗಿದೆ.
- ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಕಲಂ: 27(b) NDPS Act ರಂತೆ ಪ್ರಕರಣ ದಾಖಲಾಗಿದೆ.