ಮಂಗಳೂರು: ದಿನಾಂಕ :18-02-2024(ಹಾಯ್ ಉಡುಪಿ ನ್ಯೂಸ್)
ಪ್ರಧಾನಿ ಮೋದಿ ಸರ್ವಾಧಿಕಾರಿ.ಈ ಬಾರಿಯೂ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಭವಿಷ್ಯದಲ್ಲಿ ದೇಶದಲ್ಲಿ ಚುನಾವಣೆಗಳೇ ನಡೆಯುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳೂರಿನಲ್ಲಿ ನಿನ್ನೆ ನಡೆದ ಕಾಂಗ್ರೆಸ್ ಕಾರ್ಯಕರ್ತರ ರಾಜ್ಯ ಮಟ್ಟದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.
ಬಿಜೆಪಿಯವರು ಚುನಾವಣಾ ಬಾಂಡಿನಿಂದ 6 ಸಾವಿರ ಕೋಟಿ ಕಪ್ಪು ಹಣವನ್ನು ಉಳ್ಳವರಿಂದ ಗಳಿಸಿದ್ದಾರೆ.ಆದರೆ ನಮ್ಮ ಪಕ್ಷದ ವಿವಿಧ ಬ್ಯಾಂಕ್ ಖಾತೆಗಳನ್ನು ಸ್ಥಗಿತ ಗೊಳಿಸಿದ್ದಾರೆ.ಕಾಂಗ್ರೆಸ್ ಪಕ್ಷದ ಸದಸ್ಯತ್ವ ದಿಂದ ಗಳಿಸಿದ ಹಣಕ್ಕೂ ಕೈ ಹಾಕಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಬೇಸರ ವ್ಯಕ್ತಪಡಿಸಿದರು.
ಬಿಜೆಪಿಯವರು ನಮ್ಮ ಕಾರ್ಯಕ್ರಮಗಳನ್ನಷ್ಟೇ ಅಲ್ಲ ನಾವು ಬಳಸಿದ “ಗ್ಯಾರಂಟಿ ‘ ಪದವನ್ನೂ ಕದ್ದು “ಮೋದಿ ಗ್ಯಾರಂಟಿ ” ಎಂದು ಪ್ರಚಾರ ಮಾಡಲು ಪ್ರಾರಂಭಿಸಿದ್ದಾರೆ ಎಂದು ವ್ಯಂಗ್ಯಭರಿತ ಶೈಲಿಯಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಟೀಕಾಪ್ರಹಾರ ಮಾಡಿದ್ದಾರೆ. ಮೋದಿ ಕರ್ನಾಟಕಕ್ಕೆ ತೆರಿಗೆ ಪಾಲನ್ನು ನೀಡದೆ ವಂಚಿಸಿದ್ದಾರೆ ಎಂದು ಆರೋಪಿಸಿದರು.