ಅಜೆಕಾರು: ದಿನಾಂಕ: 01/03/2024 (ಹಾಯ್ ಉಡುಪಿ ನ್ಯೂಸ್) ಅಜೆಕಾರು ಪೊಲೀಸ್ ಠಾಣೆಯ ವ್ಯಾಪ್ತಿಯ ಸಾರ್ವಜನಿಕ ಸ್ಥಳದಲ್ಲಿ ಕೋಳಿ ಅಂಕ ಜುಗಾರಿ ನಡೆಸುತ್ತಿದ್ದ ನಾಲ್ವರನ್ನು ಅಜೆಕಾರು ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ರವಿ ಬಿಕೆ ಅವರು ಬಂಧಿಸಿದ್ದಾರೆ.
ಅಜೆಕಾರು ಪೊಲೀಸ್ ಠಾಣೆ ಪೊಲೀಸ್ ಉಪ ನಿರೀಕ್ಷಕರಾದ ರವಿ ಬಿಕೆ ಅವರು ದಿನಾಂಕ : 29-02-2024 ರಂದು ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಮಧ್ಯಾಹ್ನ ಕೋಳಿ ಅಂಕ ಜೂಜಾಟ ನಡೆಯುತ್ತಿದೆ ಎಂಬುದಾಗಿ ಸಾರ್ವಜನಿಕರಿಂದ ಮಾಹಿತಿ ಬಂದ ಮೇರೆಗೆ ಕೂಡಲೇ ಕೋಳಿ ಅಂಕ ನಡೆಯುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿ ಅಲ್ಲಿ ಕೋಳಿ ಅಂಕ ಜೂಜಾಟ ನಡೆಸುತ್ತಿದ್ದ ಸತೀಶ್, ಪ್ರಕಾಶ್, ಸಂದೀಪ್, ರಾಘು ಎಂಬವರನ್ನು ವಶಕ್ಕೆ ಪಡೆದು ಜೂಜಾಟಕ್ಕೆ ಉಪಯೋಗಿಸಿದ 2 ಹುಂಜಗಳು, ಕೋಳಿಯ ಕಾಲಿಗೆ ಕಟ್ಟುವ ಬಾಳು, ಹಗ್ಗ ಮತ್ತು ಜೂಜಾಟಕ್ಕೆ ಉಪಯೋಗಿಸಿದ ರೂಪಾಯಿ 500/- ನಗದು ಹಣವನ್ನು ಸ್ವಾಧೀನಪಡಿಸಿಕೊಂಡಿರುತ್ತಾರೆ.
ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಕಲಂ: 11 (1) (A) ಪ್ರಾಣಿ ಹಿಂಸೆ ತಡೆ ಕಾಯ್ದೆ ಮತ್ತು ಕಲಂ: 87, 93 ಕರ್ನಾಟಕ ಪೊಲೀಸ್ ಕಾಯ್ದೆ ಯಂತೆ ಪ್ರಕರಣ ದಾಖಲಾಗಿದೆ.