Spread the love

ಕರವೇ ಜಿಲ್ಲಾಧ್ಯಕ್ಷರಾದ ಸುಜಯ ಪೂಜಾರಿ ಹಾಗೂ ಜಿಲ್ಲಾ ಮಹಿಳಾ ಅಧ್ಯಕ್ಷರಾದ ಗೀತಾ ಪಾಂಗಾಳರವರ ನೇತ್ರತ್ವದಲ್ಲಿ ಕರವೇ ಕಾರ್ಯಕರ್ತರು ಇಂದು ಉಡುಪಿ ಜಿಲ್ಲಾಧಿಕಾರಿ ಕೆ.ವಿದ್ಯಾ ಕುಮಾರಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಉಡುಪಿಯಲ್ಲಿ ಕಡ್ಡಾಯವಾಗಿ ಅಂಗಡಿಗಳ ನಾಮಫಲಕಗಳಲ್ಲಿ 60 ಶೇಕಡಾ ಕನ್ನಡ ಕಡ್ಡಾಯ ಗೊಳಿಸ ಬೇಕೆಂದು ಅವರೊಂದಿಗೆ ಮನವಿ ನೀಡಿ ಚರ್ಚೆ ನಡೆಸಿದರು. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿಯವರು ಇಂದು ಬೆಳಿಗ್ಗೆ ಕನ್ನಡ ನಾಮಫಲಕ ಕುರಿತು ಅಧಿಕಾರಿಗಳ ಸಭೆಯನ್ನು ಕರೆಯಲಾಗಿದ್ದು ಉಡುಪಿಯ ಅಂಗಡಿ ಮುಂಗಟ್ಟು ಗಳಲ್ಲಿ 60 ಶೇಕಡ ಕನ್ನಡವುಳ್ಳ ನಾಮಫಲಕ ಒಂದು ವಾರದ ಒಳಗೆ ಕಡ್ಡಾಯವಾಗಿ ಹಾಕಲೇಬೇಕು ಎಂದು ಪ್ರತಿಯೊಂದು ಅಧಿಕಾರಿಗಳಿಗೆ, ವ್ಯಾಪಾರಸ್ಥರಿಗೆ ಎಚ್ಚರಿಕೆಯನ್ನು ನೀಡಲಾಗಿದೆ ಎಂದು  ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ. ಜಿಲ್ಲಾ ಮಹಿಳಾ ಅಧ್ಯಕ್ಷರಾದ ಗೀತಾ ಪಾಂಗಾಳ ,ಜಿಲ್ಲಾಮಹಿಳಾ ಉಪಾಧ್ಯಕ್ಷರಾದ ದೇವಕಿ ಬಾರ್ಕೂರು, ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿ ಜ್ಯೋತಿ, ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿ ಕೃಷ್ಣಕುಮಾರ್, ಜಿಲ್ಲಾ ಸದಸ್ಯರಾದ ರಾಜಕುಮಾರ್, ಮತ್ತು ಅಶೋಕ್, ಉಡುಪಿ ತಾಲೂಕು ಸದಸ್ಯರಾದ ಪ್ರಮೀಳ ಉಪಸ್ಥಿತರಿದ್ದರು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: No Copying!