- ಕಾರ್ಕಳ: ದಿನಾಂಕ 18/03/2024(ಹಾಯ್ ಉಡುಪಿ ನ್ಯೂಸ್) ಕಸಬಾ ಗ್ರಾಮದ ಸರಕಾರಿ ಹಾಡಿಯಲ್ಲಿ ಅಂದರ್ ಬಾಹರ್ ಜುಗಾರಿ ಆಡುತ್ತಿದ್ದ ಐವರನ್ನು ಕಾರ್ಕಳ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಧನಂಜಯ ಬಿ ಸಿ, ಅವರು ಬಂಧಿಸಿದ್ದಾರೆ.
- ಕಾರ್ಕಳ ನಗರ ಪೊಲೀಸ್ ಠಾಣೆ ಪೊಲೀಸ್ ಉಪ ನಿರೀಕ್ಷಕರಾದ ಧನಂಜಯ ಬಿ.ಸಿ ಅವರಿಗೆ ದಿನಾಂಕ:17-03-2024 ರಂದು ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಪೆರ್ವಾಜೆ ಪತ್ತೊಂಜಿಕಟ್ಟೆ ಸರಕಾರಿ ಹಾಡಿ ಸಾರ್ವಜನಿಕ ಸ್ಥಳದಲ್ಲಿ ಕೆಲವು ವ್ಯಕ್ತಿಗಳು ಹಣವನ್ನು ಪಣವಾಗಿಟ್ಟು ಇಸ್ಪೀಟು ಎಲೆಗಳನ್ನು ಉಪಯೋಗಿಸಿ ಅಂದರ್ ಬಾಹರ್ ಆಟ ಆಡುತ್ತಿರುವುದಾಗಿ ಬಂದ ಸಾರ್ವಜನಿಕ ಮಾಹಿತಿ ಮೇರೆಗೆ ಕೂಡಲೇ ದಾಳಿ ನಡೆಸಿದ್ದಾರೆ .
- ಸ್ಥಳದಲ್ಲಿ ಇಸ್ಪೀಟ್ ಜುಗಾರಿ ಆಡುತ್ತಿದ್ದ ಆಪಾದಿತರಾದ ಉಮೇಶ, ಪ್ರೇಮಾನಂದ, ಪ್ರದೀಪ, ಸಂದೀಪ, ಗಣೇಶ ಎಂಬವರನ್ನು ಬಂಧಿಸಿ ಆವರು ಕೃತ್ಯಕ್ಕೆ ಬಳಸಿದ ನಗದು 1600/-, ಇಸ್ಪೀಟ್ ಎಲೆಗಳು, ಹಳೆಯ ನ್ಯೂಸ್ ಪೇಪರ್ ನ್ನು ಸ್ವಾಧೀನಪಡಿಸಿಕೊಂಡಿರುತ್ತಾರೆ.
- ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಕಲಂ: 87 KP ACT ರಂತೆ ಪ್ರಕರಣ ದಾಖಲಾಗಿರುತ್ತದೆ.