ಮಣಿಪಾಲ:28-03-2024(ಹಾಯ್ ಉಡುಪಿ ನ್ಯೂಸ್) ಟೈಗರ್ ಸರ್ಕಲ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ್ದ ಯುವಕನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
ದಿನಾಂಕ: 24.03.2024 ರಂದು ಮಣಿಪಾಲ ಪೊಲೀಸ್ ಠಾಣೆಯ ಸಿಬ್ಬಂದಿಯವರಾದ ಹೆಚ್ ಸಿ ಪ್ರಸನ್ನ ಮತ್ತು ಹೆಚ್ ಸಿ ಇಮ್ರಾನ್ ರವರು ಸಂಜೆ ಗಸ್ತು ಕರ್ತವ್ಯದಲ್ಲಿರುವಾಗ ಟೈಗರ್ ಸರ್ಕಲ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಪೆರಂಪಳ್ಳಿ, ಮಣಿಪಾಲ ನಿವಾಸಿ ರಾಘವೇಂದ್ರ (42) ಎಂಬವನು ಅಮಲಿನಲ್ಲಿದ್ದು, ಆತನು ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವ ಅನುಮಾನದ ಮೇರೆಗೆ ಅವನನ್ನು ಬಂಧಿಸಿ ವಶಕ್ಕೆ ಪಡೆದು ದಿನಾಂಕ: 24.03.2024 ರಂದು ಆತ ಗಾಂಜಾ ಸೇವನೆ ಮಾಡಿದ ಕುರಿತು ಪರೀಕ್ಷೆ ನಡೆಸುವ ಬಗ್ಗೆ ಮಣಿಪಾಲ ಕೆ ಎಂ ಸಿ ಪೊರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯರ ಮುಂದೆ ಹಾಜರುಪಡಿಸಿದ್ದು ಆಪಾದಿತ ರಾಘವೇಂದ್ರನು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿರುತ್ತದೆ ಎಂಬುದಾಗಿ ಮಣಿಪಾಲ ಕೆ ಎಂ ಸಿ ಪೊರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯಾಧಿಕಾರಿಗಳು ದೃಢಪತ್ರವನ್ನು ನೀಡಿರುತ್ತಾರೆ ಎನ್ನಲಾಗಿದೆ .
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಕಲಂ: 27(b) NDPS Act ನಂತೆ ಪ್ರಕರಣ ದಾಖಲಾಗಿದೆ.