ಕಾರ್ಕಳ: ದಿನಾಂಕ: 28/03/2024 (ಹಾಯ್ ಉಡುಪಿ ನ್ಯೂಸ್) ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮಟ್ಕಾ ಜುಗಾರಿ ನಡೆಸುತ್ತಿದ್ದ ಯುವಕನನ್ನು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ರುಕ್ಮ ನಾಯ್ಕ ಅವರು ಬಂಧಿಸಿದ್ದಾರೆ.
ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸ್ ಉಪ ನಿರೀಕ್ಷಕರಾದ ರುಕ್ಮ ನಾಯ್ಕ ಅವರಿಗೆ ದಿನಾಂಕ: 25-03-2024ರಂದು ಠಾಣೆಯ ವ್ಯಾಪ್ತಿಯಲ್ಲಿ ಕೀರ್ತನ್ (31) ಎಂಬಾತ ಸಾರ್ವಜನಿಕರಿಂದ ಹಣವನ್ನು ಪಣವಾಗಿಟ್ಟು ಹಣವನ್ನು ಪಡೆದು ಕೊಂಡು ಮಟ್ಕಾ ಜುಗಾರಿ ಆಟ ಆಡುತ್ತಿದ್ದಾನೆ ಎಂದು ಸಾರ್ವಜನಿಕ ರಿಂದ ಬಂದ ಮಾಹಿತಿ ಯಂತೆ ಕೂಡಲೇ ಸ್ಥಳಕ್ಕೆ ದಾಳಿ ನಡೆಸಿದ್ದಾರೆ.
ದಾಳಿ ನಡೆಸಿ ಆರೋಪಿಯನ್ನು ಬಂಧಿಸಿ ವಶಕ್ಕೆ ಪಡೆದು ಆರೋಪಿಯ ವಶದಲ್ಲಿದ್ದ ಮಟ್ಕಾ ಜುಗಾರಿ ಆಟದಿಂದ ಸಂಗ್ರಹಿಸಿದ ನಗದು ರೂಪಾಯಿ 1380/-, ಮಟ್ಕಾ ನಂಬ್ರ ಬರೆದ ಚೀಟಿ ಮತ್ತು ಬಾಲ್‌ಪೆನ್ ಅನ್ನು ವಶಕ್ಕೆ ಪಡೆದಿದ್ದಾರೆ .
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ: 78 (i)(iii) ಕರ್ನಾಟಕ ಪೊಲೀಸ್ ಕಾಯ್ದೆ ಯಂತೆ ಪ್ರಕರಣ ದಾಖಲಾಗಿದೆ.