Spread the love
  • ಉಡುಪಿ: ದಿನಾಂಕ 29/03/2024(ಹಾಯ್ ಉಡುಪಿ ನ್ಯೂಸ್) ಆಭರಣ ಮೋಟಾರ್ಸ್ ಹಿಂಬದಿಯ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಬರೆಯುತ್ತಿದ್ದ ವ್ಯಕ್ತಿಯನ್ನು ಉಡುಪಿ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಭರತೇಶ ಕಂಕಣವಾಡಿಯವರು ಬಂಧಿಸಿದ್ದಾರೆ.
  • ಉಡುಪಿ ನಗರ ಪೊಲೀಸ್‌ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಭರತೇಶ ಕಂಕಣವಾಡಿ ಅವರು ದಿನಾಂಕ :28-03-2024 ರಂದು ರೌಂಡ್ಸ್‌ ಕರ್ತವ್ಯದಲ್ಲಿರುವಾಗ ಪುತ್ತೂರು ಗ್ರಾಮದ ಆಭರಣ ಮೋಟಾರ್ಸ್ ಹಿಂಬದಿಯ ಸಾರ್ವಜನಿಕ ಸ್ಥಳದಲ್ಲಿ ಓರ್ವ ವ್ಯಕ್ತಿಯು ಮಟ್ಕಾ ಜುಗಾರಿ ಆಟದ ಬಗ್ಗೆ ಹಣ ಸಂಗ್ರಹಿಸುತ್ತಿದ್ದಾನೆ ಎಂದು ಸಾರ್ವಜನಿಕರಿಂದ ಮಾಹಿತಿ ದೊರೆತ ಮೇರೆಗೆ ಕೂಡಲೇ ಅಲ್ಲಿಗೆ ದಾಳಿ ನಡೆಸಿದ್ದಾರೆ .
  • ಅಲ್ಲಿ ಮಟ್ಕಾ ಜುಗಾರಿ ಆಟ ನಡೆಸುತ್ತಿದ್ದ ರಮೇಶ್(52) ಎಂಬಾತನನ್ನು ಬಂಧಿಸಿ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ  ತಾನು ಕಮಿಷನ್ ಹಣಕ್ಕಾಗಿ ಸಾರ್ವಜನಿಕರಿಂದ ಮಟ್ಕಾ ಜುಗಾರಿ ಆಟದ ಬಗ್ಗೆ ಹಣವನ್ನು ಸಂಗ್ರಹಿಸಿ ವಸಂತ್ ಎಂಬಾತನಿಗೆ ಕೊಡುತ್ತಿರುವುದಾಗಿ ತಿಳಿಸಿದ್ದಾನೆ ಎನ್ನಲಾಗಿದೆ.
  • ,ಆಪಾದಿತ ರಮೇಶನ ವಶದಿಂದ ಮಟ್ಕಾ ಜುಗಾರಿ ಆಟಕ್ಕೆ ಸಂಗ್ರಹಿಸಿದ ನಗದು ರೂಪಾಯಿ 770/-,ಮಟ್ಕಾ ನಂಬ್ರ ಬರೆದ ಚೀಟಿ, ಬಾಲ್‌ಪೆನ್ನನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
  • ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಕಲಂ: 78 (i) (iii) KP ACT ರಂತೆ ಪ್ರಕರಣ ದಾಖಲಾಗಿದೆ.. 

error: No Copying!