ದೆಹಲಿ: ದಿನಾಂಕ: 02-04-2024(ಹಾಯ್ ಉಡುಪಿ ನ್ಯೂಸ್) ಅಬಕಾರಿ ನೀತಿ ರೂಪಿಸುವ ಸಂಬಂಧ ನಡೆದಿದೆ ಎನ್ನಲಾದ ಹಣದ ಅಕ್ರಮ ವರ್ಗಾವಣೆಯಲ್ಲಿ ಇ .ಡಿ ಬಂಧಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಇಂದು ವಿಚಾರಣೆ ನಡೆಸಿದ ನಗರದ ನ್ಯಾಯಾಲಯವು ಕೇಜ್ರಿವಾಲ್ ಅವರನ್ನು ಏಪ್ರಿಲ್ 15ರ ವರೆಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದೆ.
ವೈದ್ಯಕೀಯ ಪರೀಕ್ಷೆಯ ನಂತರ ಕೇಜ್ರಿವಾಲ್ ಅವರನ್ನು ಸೋಮವಾರ ತಿಹಾರ್ ಜೈಲಿಗೆ ಕಳುಹಿಸಲಾಗಿದೆ. ಕೇಜ್ರಿವಾಲ್ ಅವರನ್ನು ತಿಹಾರ್ ಜೈಲ್ ನ ಸಂಖ್ಯೆ 2 ರಲ್ಲಿ ಇಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.