ಮಂಡ್ಯ: ದಿನಾಂಕ:03-04-2024(ಹಾಯ್ ಉಡುಪಿ ನ್ಯೂಸ್) ಮಂಡ್ಯ ದಲ್ಲಿ ಇಂದು ನಡೆದ ಸಂಸದೆ ಸುಮಲತಾ ಬೆಂಬಲಿಗರ ಸಭೆಯಲ್ಲಿ ಸುಮಲತಾ ಅಂಬರೀಶ್ ರವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದರು.
ಭಾರತೀಯ ಜನತಾ ಪಕ್ಷದ ಟಿಕೆಟ್ ಆಕಾಂಕ್ಷಿ ಯಾಗಿದ್ದ ಈ ಹಿಂದಿನ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರಿಗೆ ಮಂಡ್ಯ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಸಿಗದ ಕಾರಣ ಪಕ್ಷೇತರವಾಗಿ ಸ್ಪರ್ಧಿಸುವರೇ ಎಂಬ ಪ್ರಶ್ನೆ ಕಾಡಿತ್ತು. ಇಂದು ಅಧಿಕೃತವಾಗಿ ಸುಮಲತಾ ಅವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸುವ ಮೂಲಕ ಚರ್ಚೆಗೆ ತೆರೆ ಎಳೆದಿದ್ದಾರೆ. ಈ ಮೂಲಕ ಬಿಜೆಪಿ, ಜೆಡಿಎಸ್ ಬೆಂಬಲಿತ ಅಭ್ಯರ್ಥಿಗೆ ಬೆಂಬಲ ಸೂಚಿಸಿದ್ದಾರೆ.
ಇನ್ನು ಮುಂದೆ ಕಾಂಗ್ರೆಸ್ ಅಂತೂ ಸೇರುವುದಿಲ್ಲ. ಅಧಿಕ್ರತವಾಗಿ ಬಿಜೆಪಿ ಸೇರುವ ಬಗ್ಗೆ ಕೆಲವೇ ದಿನಗಳಲ್ಲಿ ತಿಳಿಸುತ್ತೇನೆ ಎಂದರು.