Spread the love
  • ಕಾರ್ಕಳ: ದಿನಾಂಕ: 03/04/2024(ಹಾಯ್ ಉಡುಪಿ ನ್ಯೂಸ್) ಬೆತ್ತೊಟ್ಟು ಎಂಬಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಕಾರ್ಕಳ ನಗರ ಪೊಲೀಸ್‌ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಧನಂಜಯ ಬಿ ಸಿ ಅವರು ದಾಳಿ ನಡೆಸಿ ಆರು ಜನರನ್ನು ಬಂಧಿಸಿದ್ದಾರೆ.
  • ಕಾರ್ಕಳ ನಗರ ಪೊಲೀಸ್ ಠಾಣೆ ಪೊಲೀಸ್ ಉಪ ನಿರೀಕ್ಷಕರಾದ ಧನಂಜಯ ಬಿ.ಸಿ ಅವರಿಗೆ ದಿನಾಂಕ:02-04-2024ರಂದು ಬೆತ್ತೊಟ್ಟು ಎಂಬಲ್ಲಿ ಕೆಲವು ವ್ಯಕ್ತಿಗಳು ಕೋಳಿಗಳ ಕಾಲಿಗೆ ಬಾಳುಕಟ್ಟಿ ಕೋಳಿಗಳ ಮೇಲೆ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಆಡುತ್ತಿರುವುದಾಗಿ ಸಾರ್ವಜನಿಕರಿಂದ ಮಾಹಿತಿ ಬಂದ ಮೇರೆಗೆ ಕೂಡಲೇ ದಾಳಿ ನಡೆಸಿದ್ದಾರೆ .
  • ಪೊಲೀಸರು ದಾಳಿ ನಡೆಸಿದಾಗ ಅಲ್ಲಿ ಸೇರಿದ್ದ ಜನರು ಓಡಿ ಹೋಗಿದ್ದು, ಆಪಾದಿತ ಉದಯ ಎಂಬಾತನನ್ನು ಹಿಡಿದು ವಿಚಾರಿಸಿದಾಗ ಓಡಿ ಹೋದವರು ಸತೀಶ, ಜಯ , ಗಣೇಶ , ಉಮೇಶ , ಸುರೇಶ ಮತ್ತಿತರರು ಇದ್ದ ವಿಚಾರವನ್ನು ತಿಳಿಸಿದ್ದಾನೆ ಎನ್ನಲಾಗಿದೆ.
  • ಸ್ಥಳದಲ್ಲಿದ್ದ ಜೂಜಾಟಕ್ಕೆ ಬಳಸಿದ 3 ಕೋಳಿಗಳನ್ನು ಮತ್ತು 4 ವಾಹನಗಳನ್ನು ಹಾಗೂ ಆಪಾದಿತನು ಜೂಜಾಟಕ್ಕೆ ಬಳಸಿದ್ದ ನಗದು 900/- ಹಣವನ್ನು ಸ್ವಾಧೀನಪಡಿಸಿಕೊಂಡಿರುತ್ತಾರೆ.
  • ಈ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ  ಕಲಂ: 87, 93 ಕರ್ನಾಟಕ ಪೊಲೀಸ್ ಕಾಯ್ದೆ ಮತ್ತು 11(1) (ಎನ್) Prevention Of Cruelty to Animals Act 1960 ರಂತೆ ಪ್ರಕರಣ ದಾಖಲಾಗಿದೆ.

error: No Copying!