Spread the love
  • ಹಿರಿಯಡ್ಕ: ದಿನಾಂಕ :04-04-2024(ಹಾಯ್ ಉಡುಪಿ ನ್ಯೂಸ್) ‌ಹಿರಿಯಡ್ಕ ಠಾಣಾ ವ್ಯಾಪ್ತಿಯ ರೌಡಿ ದಿವಾಕರ ಎಂಬವನು ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವ ಮಾಹಿತಿ ಮೇರೆಗೆ ಬ್ರಹ್ಮಾವರ ಪೊಲೀಸ್‌ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಮಧು ಬಿ.ಇ ಅವರು ಬಂಧಿಸಿದ್ದಾರೆ.
  • ಬ್ರಹ್ಮಾವರ ಪೊಲೀಸ್‌ ಠಾಣೆ ಪೊಲೀಸ್ ಉಪ ನಿರೀಕ್ಷಕರಾದ ಮಧು ಬಿ.ಇ ಅವರಿಗೆ ಹಿರಿಯಡ್ಕ ಠಾಣಾ ವ್ಯಾಪ್ತಿಯ ರೌಡಿ ಅಸಾಮಿ ದಿವಾಕರ ಎಂಬಾತನು ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ಬಗ್ಗೆ ಗುಪ್ತ ಮಾಹಿತಿ ದೊರೆತ ಮೇರೆಗೆ ದಿನಾಂಕ 02/04/2024 ರಂದು ಬೆಳಿಗ್ಗೆ ಇತರೆ ಅಧಿಕಾರಿ ಸಿಬ್ಬಂದಿಯವರೊಂದಿಗೆ ದಿವಾಕರ ಎಂಬಾತನ ಮನೆಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.
  • ಆತನ ಮನೆಯಲ್ಲಿ ಪರಿಶೀಲನೆ ನಡೆಸಿದಾಗ ಅಲ್ಲಿ ಕಪ್ಪು ಬಣ್ಣದ ಬಟ್ಟೆ ಪೌಚ್‌ , ಸಜೀವ ಮದ್ದು ಗುಂಡುಗಳು, ಮಸಿ ಕೋವಿಗೆ ಬಳಸುವ ಮದ್ದುಗುಂಡುಗಳು, ಪ್ಲಾಸ್ಟಿಕ್‌ ಪೌಚ್‌ ನಲ್ಲಿ ಇರಿಸಲಾದ ಡೆಟೋನೇಟರ್‌ ಗಳು, ಪ್ಲಾಸ್ಟಿಕ್‌ ಪೌಚ್‌ನಲ್ಲಿ ಇರಿಸಲಾದ ಯಾವುದೋ ಪ್ರಾಣಿಯ ಹಲ್ಲಿನ ಆಕಾರದ ಸ್ವತ್ತುಗಳು , ಪ್ಲಾಸ್ಟಿಕ್‌ ಪೌಚ್‌ನಲ್ಲಿ ಇರಿಸಲಾದ ಯಾವುದೋ ಪ್ರಾಣಿಯ ಉಗುರಿನ ಆಕಾರದ ಸ್ವತ್ತುಗಳು, ಪಾಸ್ಟಿಕ್‌ ಪೌಚ್‌ನಲ್ಲಿ ಇರಿಸಿದ ಪಿಸ್ತೂಲ್‌ಗೆ ಬಳಸುವ 7.65 mm ಸಜೀವ ಗುಂಡುಗಳು, 15 ಇಂಚು ಉದ್ದದ ಹಳೆಯ ಕೋವಿಯ ಮರದ ಬಟ್‌ ,  ಹಾಕಿ ಸ್ಟಿಕ್‌ , ಸ್ಟೀಲ್‌ ಚಾಕುಗಳು, ಸ್ಟೀಲಿನ ದೊಡ್ಡ ಗಾತ್ರದ ಮಚ್ಚು, ನೀಲಿ ಬಣ್ಣದ ಪ್ಲಾಸ್ಟಿಕ್‌ ಚೀಲದಲ್ಲಿದ್ದ ಒಣಗಿಸಿದ ಗಾಂಜಾ, ಸಣ್ಣ ಖಾಲಿ ಪ್ಲಾಸ್ಟಿಕ್‌ ಪೌಚ್‌ಗಳು, ಪ್ಲಾಸ್ಟಿಕ್‌ ಕ್ಯಾನ್‌ ನಲ್ಲಿ ತುಂಬಿಸಿಟ್ಟಿರುವ ಸ್ಪಿರೀಟ್‌ ಸಿಕ್ಕಿದ್ದು ಇವುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
  • ಈ ಬಗ್ಗೆ ಹಿರಿಯಡ್ಕ ಪೊಲೀಸ್‌ ಠಾಣೆಯಲ್ಲಿ  ಕಲಂ : ARMS ACT, 1959 (U/s-3(I),25); NARCOTIC DRUGS & PSYCHOTROPIC SUBSTANCES ACT, 1985 (U/s-8(c),20(b) (ii) A); WILD LIFE (PROTECTION) ACT, 1972 (U/s-9,2,48,51); KARNATAKA EXCISE ACT, 1965 (U/s-32,34) ರಂತೆ ಪ್ರಕರಣ ದಾಖಲಾಗಿದೆ.

error: No Copying!