- ಪಡುಬಿದ್ರಿ: ದಿನಾಂಕ 07-04-2024(ಹಾಯ್ ಉಡುಪಿ ನ್ಯೂಸ್) ನವರಂಗ ಬಾರ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಬರೆಯುತ್ತಿದ್ದ ಇಬ್ಬರನ್ನು ಪಡುಬಿದ್ರಿ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಪ್ರಸನ್ನ ಎಂ.ಎಸ್ ಅವರು ಬಂಧಿಸಿದ್ದಾರೆ.
- ಪಡುಬಿದ್ರಿ ಪೊಲೀಸ್ ಠಾಣೆ ಪೊಲೀಸ್ ಉಪ ನಿರೀಕ್ಷಕರಾದ ಪ್ರಸನ್ನ ಎಂ.ಎಸ್ ಅವರು ದಿನಾಂಕ :03-04-2024ರಂದು ಠಾಣೆಯಲ್ಲಿರುವಾಗ ನಡ್ಸಾಲು ಗ್ರಾಮದ ನವರಂಗ ಬಾರ್ ಕಟ್ಟಡದ ಬಳಿ ಓಣಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಬ್ಬರು ವ್ಯಕ್ತಿಗಳು ಸಾರ್ವಜನಿಕರಿಂದ ಮಟ್ಕಾ ಜುಗಾರಿ ಆಟದ ಬಗ್ಗೆ ಹಣ ಸಂಗ್ರಹಿಸುತ್ತಿದ್ದಾರೆ ಎಂಬುದಾಗಿ ಬಂದ ಸಾರ್ವಜನಿಕ ಮಾಹಿತಿಯಂತೆ ಕೂಡಲೇ ದಾಳಿ ಮಾಡಿದ್ದಾರೆ .
- ಅಲ್ಲಿ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದ ಪ್ರದೀಪ್ ಕುಮಾರ್ ಮತ್ತು ಪ್ರವೀಣ್ ಎಂಬವರನ್ನು ಬಂಧಿಸಿ ವಶಕ್ಕೆ ಪಡೆದು, ಅವರು ಮಟ್ಕಾ ಜುಗಾರಿ ಆಟದ ಬಗ್ಗೆ ಸಾರ್ವಜನಿಕರಿಂದ ಸಂಗ್ರಹಿಸಿದ ನಗದು ರೂಪಾಯಿ 3,480/- , ಮಟ್ಕಾ ನಂಬ್ರ ಬರೆದ ಬಿಳಿ ಕಾಗದ, ಮತ್ತು ಬಾಲ್ ಪೆನ್ನು, ಮೊಬೈಲ ನ್ನು ಸ್ವಾಧೀನಪಡಿಸಿಕೊಂಡಿರುತ್ತಾರೆ.
- ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಕಲಂ :78 (I)(a) (III) ಕೆಪಿ ಆಕ್ಟ್ ರಂತೆ ಪ್ರಕರಣ ದಾಖಲಾಗಿದೆ.