ಮಣಿಪಾಲ: ದಿನಾಂಕ 11/05/2024 (ಹಾಯ್ ಉಡುಪಿ ನ್ಯೂಸ್) ಟೈಗರ್ ಸರ್ಕಲ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿ ಅಮಲಿನಲ್ಲಿದ್ದ ಯುವಕನನ್ನು ಮಣಿಪಾಲ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಉದಯ್ ಕುಮಾರ್ ಅವರು ಬಂಧಿಸಿದ್ದಾರೆ.
ಮಣಿಪಾಲ ಪೊಲೀಸ್ ಠಾಣೆ ಹೆಡ್ ಕಾನ್ಸ್ಟೇಬಲ್ ಉದಯ್ ಕುಮಾರ್ ಅವರು ದಿನಾಂಕ:03-05-2024 ರಂದು ಶಿವಳ್ಳಿ ಗ್ರಾಮದ ಟೈಗರ್ ಸರ್ಕಲ್ ಬಳಿ ಸಾರ್ವಜನಿಕ ಸ್ಥಳದಲ್ಲಿ ರೌಂಡ್ಸ್ ಕರ್ತವ್ಯದಲ್ಲಿರುವಾಗ ಟೈಗರ್ ಸರ್ಕಲ್ ಬಳಿ ರಾಕೇಶ್ (23) ಎಂಬಾತ ಅಮಲಿನಲ್ಲಿದ್ದು, ಆತ ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವ ಕುರಿತು ಅನುಮಾನದ ಮೇರೆಗೆ ಬಂಧಿಸಿ ಪರೀಕ್ಷೆ ನಡೆಸುವ ಬಗ್ಗೆ ವಶಕ್ಕೆ ಪಡೆದು ಮಣಿಪಾಲ ಕೆ ಎಂ ಸಿ ಪೊರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯರ ಮುಂದೆ ಹಾಜರುಪಡಿಸಿದ್ದು, ವೈದ್ಯಾಧಿಕಾರಿಗಳು ದಿನಾಂಕ 11/05/2024 ರಂದು ರಾಕೇಶ್ ಗಾಂಜಾ ಸೇವನೆ ಮಾಡಿರುವ ಬಗ್ಗೆ ದೃಢಪತ್ರವನ್ನು ನೀಡಿರುತ್ತಾರೆ ಎನ್ನಲಾಗಿದೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಕಲಂ: 27 (B) NDPS ಕಾಯ್ದೆ ಯಂತೆ ಪ್ರಕರಣ ದಾಖಲಾಗಿದೆ.